ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ, ಉಕ್ರೇನ್ ರಾಜಧಾನಿ ಕೈವ್‌ನಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ಹರ್ಜೋತ್ ಸಿಂಗ್, ಸರ್ಕಾರದ ರಕ್ಷಣಾ ಕಾರ್ಯಾಚರಣೆ “ಆಪರೇಷನ್ ಗಂಗಾ” ಭಾಗವಾಗಿ ಇಂದು ಹಿಂತಿರುಗಲಿದ್ದಾರೆ.
ಹರ್ಜೋತ್ ಸಿಂಗ್ ಅವರ ವಿಮಾನವು ದೆಹಲಿ ಬಳಿಯ ಹಿಂಡನ್ ಏರ್ ಬೇಸ್‌ನಲ್ಲಿ ಸಂಜೆ 7 ಗಂಟೆಗೆ ಇಳಿಯುವ ನಿರೀಕ್ಷೆಯಿದೆ. ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಳ್ಳುವ ದೇಶಗಳಲ್ಲಿ ಒಂದಾದ ಪೋಲೆಂಡ್‌ನಿಂದ ಮರಳಿ ಕರೆತರಲಾಗುತ್ತಿರುವ 200 ಸಿಕ್ಕಿಬಿದ್ದ ಭಾರತೀಯರಲ್ಲಿ ಅವರು ಕೂಡಾ ಒಬ್ಬರಾಗಿದ್ದಾರೆ.
ಪೋಲೆಂಡ್‌ನಲ್ಲಿ ತೆರವು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಕೇಂದ್ರ ಸಚಿವ ವಿಕೆ ಸಿಂಗ್, ” ಹರ್ಜೋತ್ ಸಿಂಗ್ ಕೈವ್ ಯುದ್ಧದ ಸಂದರ್ಭದಲ್ಲಿ ಗುಂಡು ಹಾರಿಸಲ್ಪಟ್ಟ ಭಾರತೀಯ. ಅವನ ಪಾಸ್‌ಪೋರ್ಟ್ ಸಹ ಗೊಂದಲದಲ್ಲಿ ಕಳೆದುಹೋಗಿದೆ. ಹರ್ಜೋತ್ ನಾಳೆ ನಮ್ಮೊಂದಿಗೆ ಭಾರತವನ್ನು ತಲುಪುತ್ತಿದ್ದಾರೆ ಎಂದು ತಿಳಿಸಲು ಸಂತೋಷವಾಗಿದೆ. ಮನೆ ಆಹಾರ ಮತ್ತು ಆರೈಕೆಯೊಂದಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬಹುದೆಂದು ಭಾವಿಸುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.
31 ವರ್ಷದ ವಿದ್ಯಾರ್ಥಿ ಹರ್ಜೋತ್ ಸಿಂಗ್ ಅವರಿಗೆ ಗುಂಡು ತಗುಲುವ ಸಂದರ್ಭದಲ್ಲಿ ಕೀವ್ನಿಂದ ತಪ್ಪಿಸಿಕೊಂಡು ಗಡಿಗೆ ತೆರಳುವ ಸನ್ನಾಹದಲ್ಲಿದ್ದರು. ಕೀವ್ನಿಂದ ತಪ್ಪಿಸಿಕೊಂಡು ಮತ್ತೊಂದು ನಗರ ಎಲ್ವಿವ್ಗೆ ತೆರಳಲು ಅವರು ಪ್ರಯತ್ನಿಸುತ್ತಿದ್ದರು.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…