Featured

ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ : ಡಾ.ಕೆ ಸುಧಾಕರ್ -Vishwanews24

ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ : ಡಾ.ಕೆ ಸುಧಾಕರ್ -Vishwanews24

ಬೆಂಗಳೂರು: ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ ಮಾಡಿರುವುದಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದರು.

ಉಕ್ರೇನ್ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಉಕ್ರೇನ್‌ನಿಂದ ಕರ್ನಾಟಕಕ್ಕೆ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇಫಾಗಿ ಬಂದಿದ್ದಾರೆ. ಅವರ ಜೊತೆ ಸಭೆ ನಡೆಸುವಂತೆ ಸಿಎಂ ಹೇಳಿದ್ದರು. ಹೀಗಾಗಿ ಇಂದು ಸಭೆ ನಡೆಸಿದ್ದೇವೆ ಎಂದರು.

ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳು ಇವೆ. ತಕ್ಷಣಕ್ಕೆ ಅದೇ ಕಾಲೇಜುಗಳಲ್ಲಿ ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳು ಕಲಿಕೆ ಮುಂದುವರಿಸಬಹುದು. ವಿದ್ಯಾರ್ಥಿಗಳು ಇರುವ ಜಿಲ್ಲೆಗಳಲ್ಲೇ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.

ನಾನು ಸಮಿತಿಯೊಂದನ್ನು ರಚನೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ರಚನೆಯಾಗಿದೆ. ಉಕ್ರೇನ್‌ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸಮಿತಿ ವರದಿ ನೀಡಲಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಸಮಿತಿ ವರದಿ ಕೊಡಲಿದೆ. ಇದನ್ನ ನಾವು ಕೇಂದ್ರಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ನಡೆಸಿದ್ದಾರೆ. ಯುದ್ಧ ಬಹಳ ಬೇಗ ಮುಗಿಯುವ ಲಕ್ಷಣ ಇದೆ. ಇರುವ ನಿಯಮಗಳಡಿ ಅವರ ಭವಿಷ್ಯ ರೂಪಿಸುವ ಕೆಲಸ ಮಾಡುತ್ತೇವೆ. ಅವರು ಬದುಕಿ ಬಂದಿರುವುದೇ ನಮ್ಮ ಭಾಗ್ಯ. ನಿಮ್ಮ ಭವಿಷ್ಯ ಉಜ್ವಲವಾಗಬೇಕು. ಮಾನಸಿಕವಾಗಿ ಕುಗ್ಗಬಾರದು. ಎಲ್ಲಾ ರೀತಿಯ ಸಹಕಾರವನ್ನು ಕೊಡುವ ಕೆಲಸ ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

2 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

8 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

10 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

10 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

11 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

11 hours ago