Featured

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು – Vishwanews24

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು

ಮಾಸ್ಕೋ : ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago