ಕೈವ್: ಉಕ್ರೇನ್‌ನ ರಾಜಧಾನಿ ಕೈವ್ ಹೊರಗಿನ ಶಿಶುವಿಹಾರದ ಬಳಿ ಇಂದು ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಗವರ್ನರ್ ತಿಳಿಸಿದ್ದಾರೆ.
ಸತ್ತವರಲ್ಲಿ ಉಕ್ರೇನ್‌ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್ಸ್ಕಿ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರೋವರಿ ನಗರದಲ್ಲಿ, ಶಿಶುವಿಹಾರ ಮತ್ತು ವಸತಿ ಕಟ್ಟಡದ ಬಳಿ ಹೆಲಿಕಾಪ್ಟರ್ ಬಿದ್ದಿದೆ ಎಂದು ಕೈವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಒಲೆಕ್ಸಿ ಕುಲೆಬಾ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ದುರಂತದ ಸಮಯದಲ್ಲಿ, ಮಕ್ಕಳು ಮತ್ತು ಉದ್ಯೋಗಿಗಳು ಶಿಶುವಿಹಾರದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.
Join our Whatsapp group by clicking the below link 👇👇
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…