ಮಕ್ರಾನಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ. ನಾವು ಈಗ ಉಗ್ರರಿಗೆ ಗುಂಡೇಟು ತಿನ್ನಿಸುತ್ತಿದ್ದೇವೆ’ ಎಂದು ಸೋಮವಾರ ಹೇಳಿದ್ದಾರೆ.
ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ವಿಭಜನೆಯ ರಾಜಕಾರಣವನ್ನು ಅನುಸರಿಸಿಕೊಂಡು ಬಂದ ಕಾರಣ ದೇಶದಲ್ಲಿ ಭಯೋತ್ಪಾದನೆ ಬೆಳೆದು ಬಂದಿದೆ ಎಂದು ಆರೋಪಿಸಿದರು.
ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವಾರು ರಾಜಕೀಯ ನಾಯಕರು ಸದ್ಯ ರಾಜಸ್ಥಾನದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ರಾಜಸ್ಥಾನದ ಮಕ್ರಾನಾ ಎಂಬ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ, ಉಗ್ರಗಾಮಿಗಳಿಗೆ ಕಾಂಗ್ರೆಸ್ ಪಕ್ಷವು ಬಿರಿಯಾನಿ ನೀಡುತ್ತಿದ್ದರೆ ನಾವು ಮಾತ್ರ ಉಗ್ರಗಾಮಿಗಳಿಗೆ ಗುಂಡೇಟು ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಿರಿಯಾನಿ ತಿಂದು ಬೆಳೆದ ಉಗ್ರರಿಗೆ ನಾವು ಈಗ ಗುಂಡಿನ ರುಚಿ ತೋರಿಸುತ್ತಿರುವುದನ್ನು ನೀವು ನೋಡಿದ್ದೀರಿ. ದೇಶದಲ್ಲಿ ಭಯೋತ್ಪಾದನೆಯ ಹುಟ್ಟು, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷವೇ ಕಾರಣ, ದೇಶದಲ್ಲಿನ ಭಯೋತ್ಪಾದನೆ, ಪ್ರತ್ಯೇಕತೆ, ನಕ್ಸಲ್‌ವಾದ ಮತ್ತು ಭ್ರಷ್ಟಾಚಾರದಂತಹ ಪಿಡುಗುಗಳಿಗೆ ಜನ್ಮ ನೀಡಿದ್ದೇ ಕಾಂಗ್ರೆಸ್ ಎಂದು ಉತ್ತರ ಪ್ರದೇಶ ಸಿಎಂ ವಾಗ್ದಾಳಿ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…