Featured

ಉಗ್ರಗಾಮಿಗಳಿಗೆ ಕಾಂಗ್ರೆಸ್ ನಿಂದ ಬಿರಿಯಾನಿ, ನಮ್ಮಿಂದ ಗುಂಡೇಟು: ಆದಿತ್ಯನಾಥ್

ಮಕ್ರಾನಾ: ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್‌ ಉಗ್ರರಿಗೆ ಬಿರಿಯಾನಿ ತಿನ್ನಿಸಿದೆ. ನಾವು ಈಗ ಉಗ್ರರಿಗೆ ಗುಂಡೇಟು ತಿನ್ನಿಸುತ್ತಿದ್ದೇವೆ’ ಎಂದು ಸೋಮವಾರ ಹೇಳಿದ್ದಾರೆ.

ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಕಾಂಗ್ರೆಸ್‌ ವಿಭಜನೆಯ ರಾಜಕಾರಣವನ್ನು ಅನುಸರಿಸಿಕೊಂಡು ಬಂದ ಕಾರಣ ದೇಶದಲ್ಲಿ ಭಯೋತ್ಪಾದನೆ ಬೆಳೆದು ಬಂದಿದೆ ಎಂದು ಆರೋಪಿಸಿದರು.

ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಲವಾರು ರಾಜಕೀಯ ನಾಯಕರು ಸದ್ಯ ರಾಜಸ್ಥಾನದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ರಾಜಸ್ಥಾನದ ಮಕ್ರಾನಾ ಎಂಬ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ, ಉಗ್ರಗಾಮಿಗಳಿಗೆ ಕಾಂಗ್ರೆಸ್ ಪಕ್ಷವು ಬಿರಿಯಾನಿ ನೀಡುತ್ತಿದ್ದರೆ ನಾವು ಮಾತ್ರ ಉಗ್ರಗಾಮಿಗಳಿಗೆ ಗುಂಡೇಟು ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಿರಿಯಾನಿ ತಿಂದು ಬೆಳೆದ ಉಗ್ರರಿಗೆ ನಾವು ಈಗ ಗುಂಡಿನ ರುಚಿ ತೋರಿಸುತ್ತಿರುವುದನ್ನು ನೀವು ನೋಡಿದ್ದೀರಿ. ದೇಶದಲ್ಲಿ ಭಯೋತ್ಪಾದನೆಯ ಹುಟ್ಟು, ಬೆಳವಣಿಗೆಗೆ ಕಾಂಗ್ರೆಸ್‌ ಪಕ್ಷವೇ ಕಾರಣ, ದೇಶದಲ್ಲಿನ ಭಯೋತ್ಪಾದನೆ, ಪ್ರತ್ಯೇಕತೆ, ನಕ್ಸಲ್‌ವಾದ ಮತ್ತು ಭ್ರಷ್ಟಾಚಾರದಂತಹ ಪಿಡುಗುಗಳಿಗೆ ಜನ್ಮ ನೀಡಿದ್ದೇ ಕಾಂಗ್ರೆಸ್‌  ಎಂದು ಉತ್ತರ ಪ್ರದೇಶ ಸಿಎಂ  ವಾಗ್ದಾಳಿ ನಡೆಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago