ವಾಶಿಂಗ್ಟನ್ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಪಾಕ್ ಪ್ರೇರಿತ ಉಗ್ರನಿಂದ ಆತ್ಮಾಹುತಿ ದಾಳಿ ನಡೆದ ಬಳಿಕ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ಉಗ್ರರ ದಮನಕ್ಕೆ ಭಾರತ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ನಮ್ಮ ಬೆಂಬಲವಿದೆ ಎಂದು ಈ ರಾಷ್ಟ್ರಗಳು ತಿಳಿಸಿವೆ. ಧಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ಥಾನಕ್ಕೆ ಸೂಕ್ತ ಎದಿರೇಟು ನೀಡಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ಕೊಟ್ಟಿದ್ದಾರೆ.
ಭಾರತ ಈಗಾಗಲೇ ಪಾಕಿಸ್ತಾನದ ವಿರುದ್ದ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಸಂದೇಶವನ್ನು ರವಾನಿಸಿದೆ.
ಈ ಮಧ್ಯೆ ಭಾರತದ ಬೆಂಬಲಕ್ಕೆ ನಿಂತಿರುವ ವಿಶ್ವದ ದೊಡ್ಡಣ್ಣ ಅಮೆರಿಕಾ, ಉಗ್ರರಿಗೆ ಆಶ್ರಯ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ಪಾಕಿಸ್ತಾನಕ್ಕೆ ತಾಕೀತು ಮಾಡಿದೆ. ಜೊತೆಗೆ ಪಾಕಿಸ್ತಾನಕ್ಕೆ ನೀಡಲು ನಿರ್ಧರಿಸಿದ್ದ 1.3 ಬಿಲಿಯನ್ ಡಾಲರ್ ಆರ್ಥಿಕ ನೆರವನ್ನು ಸ್ಥಗಿತಗೊಳಿಸಿದ್ದು, ಇದು ಈಗಾಗಲೇ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ದೊಡ್ಡ ಶಾಕ್ ನೀಡಿದಂತಾಗಿದೆ.
“ಪಾಕಿಸ್ಥಾನಕ್ಕೆ ಬಲವಾದ ಎದಿರೇಟು ನೀಡಲು ಭಾರತವು ಯೋಚಿಸುತ್ತಿದೆ. ಐವತ್ತು ಸೈನಿಕರನ್ನು ಕಳಕೊಂಡ ಧುಃಖ ಹಾಗೂ ರೋಷ ಅವರಿಗಿದೆ. ನಾನೂ ಭಾರತದ ಈಗಿನ ಮನೋಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತೇನೆ. ಆದುದರಿಂದ ಭಾರತ ಹಾಗೂ ಪಾಕಿಸ್ಥಾನದೊಂದಿಗೆ ಅಮೆರಿಕಾ ನಿರಂತರ ಸಂಪರ್ಕ ನಿರತವಾಗಿದೆ” ಟ್ರಂಪ್ ಸೂಚಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…