Featured

ಉಗ್ರರ ದಾಳಿ ನಡೆಯುವ ಭೀತಿ : ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಹೈ ಅಲರ್ಟ್ ಘೋಷಣೆ -Vishwanews24

ಅಯೋಧ್ಯೆ: ಉತ್ತರಪ್ರದೇಶದಲ್ಲಿರುವ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಗುಪ್ತಚರ ಇಲಾಖೆ ಉಗ್ರರು ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ ಬೆನ್ನಲ್ಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುಪ್ತಚರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಉಗ್ರರು ನೇಪಾಳದಿಂದ ಉತ್ತರಪ್ರದೇಶವನ್ನು ತಲುಪುವ ಸಾಧ್ಯತೆಯಿದ್ದು, ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು ಮತ್ತು ಬಸ್ಸುಗಳನ್ನು ಗುರಿಯಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬೆನ್ನಲ್ಲೇ ಅಯೋಧ್ಯೆಗೆ ಬರುವ ಎಲ್ಲಾ ವಾಹನಗಳು, ಅಲ್ಲಿನ ಹೋಟೆಲ್ ಮತ್ತು ಅತಿಥಿ ಗೃಹಗಳ ತಪಾಸಣೆ ನಡೆಸಲಾಗುತ್ತಿದೆ.

ಗಣ್ಯರು ವಾರಾಂತ್ಯದಲ್ಲಿ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಶಿವಸೇನೆಯ 18 ಸಂಸದರೊಂದಿಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಮಮದಿರಕ್ಕೆ ಭೇಟಿ ನೀಡಲಿದ್ದಾರೆ.

ಈಗಾಗಲೇ ಭಯೋತ್ಪಾದಕರ ಇರುವಿಕೆ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲ್ಲಾಗಿದ್ದು, ಆ ವರದಿಯಲ್ಲಿ ಲಷ್ಕರ್-ಎ-ತೊಯ್ಬಾ ಸೇರಿದಂತೆ ಇತರ ಸಂಘಟನೆಗಳು ಉತ್ತ್ರಪ್ರದೆಶ್ದ ಫೈಜಾಬಾದ್ ಮತ್ತು ಗೋರಖ್’ಪುರದಲ್ಲಿ ರಹಸ್ಯವಾಗಿ ತಮ್ಮ ನೆಲೆಗಳನ್ನು ಸ್ಥಾಪಿಸುತ್ತಿವೆ. ಈ ನಗರಗಳಲ್ಲಿ ಭಯೋತ್ಪಾದಕ ನೆಲೆಗಳನ್ನು ಸ್ಥಾಪಿಸುವ ಮತ್ತು ಯುವಕರನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಮೊಹಮ್ಮದ್ ಉಮರ್ ಮಡ್ನಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago