Featured

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು – ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಸೊಸೆ ಎನ್ಐಎ ವಶಕ್ಕೆ -Vishwanews24

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು – ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ಸೊಸೆ ಎನ್ಐಎ ವಶಕ್ಕೆ -Vishwanews24

ಮಂಗಳೂರು : ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಮನೆಗೆ ‌ಮತ್ತೆ ಎನ್ ಐಎ ದಾಳಿ ನಡೆಸಿದ್ದು. ಉಗ್ರ ಸಂಘಟನೆ ಐಸಿಸ್ ಜೊತೆ ನಂಟಿನ ಶಂಕೆ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ.ಭಾಷಾ ಸೊಸೆ ದೀಪ್ತಿ ಆಲಿಯಾಸ್ ಮರಿಯಂ ಎನ್ ಐಎ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯ ಮನೆಯಲ್ಲಿ ಅವರನ್ನು ವಶಕ್ಕೆ ಪಡೆದ ಎನ್ಐಎ, ಬಳಿಕ ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿ ನೇರವಾಗಿ ದೆಹಲಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಈ ಹಿಂದೆ ಅಗಸ್ಟ್ 4ರಂದು ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು, ಅಂದು ಎರಡು ದಿನಗಳ ದಾಳಿಯ ಬಳಿಕ ಬಾಷಾ ಕಿರಿಯ ಪುತ್ರ ಅಬ್ದುಲ್ ರೆಹಮಾನ್ ಬಂಧಿಸಿದ್ದರು, ಈ ವೇಳೆ ಬಾಷಾರ ಮತ್ತೊಬ್ಬ ಪುತ್ರ ಅನಾಸ್ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಮೇಲೆ ಅನುಮಾನ ಬಂದಿತ್ತು. ಆದರೆ ಸಣ್ಣ ಮಗುವಿದ್ದ ಕಾರಣ ಕೇವಲ ವಿಚಾರಣೆ ನಡೆಸಿ ಬಿಟ್ಟಿದ್ದ ಎನ್ ಐಎ. ಇದೀಗ ಮತ್ತೆ ಮನೆಗೆ ಎನ್ ಐಎ ದಾಳಿ‌ ನಡೆಸಿ ದೀಪ್ತಿ ಆಲಿಯಾಸ್ ಮರಿಯಂ ಬಂಧಿಸಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವಳಾದ ದೀಪ್ತಿ ಮರಿಯಂ ಅವರು ಅನಾಸ್ ಅವರನ್ನು ಪ್ರೀತಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಿದ್ದರು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

49 minutes ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

59 minutes ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

1 hour ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

1 hour ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago