ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24

Featured, ರಾಷ್ಟ್ರ ನ್ಯೂಸ್

ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24

ನವದೆಹಲಿ: ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಾಖಲೆಯ ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲೇ ಸಚಿವರು ಈ ಹೇಳಿಕೆ ನೀಡಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಅಸ್ಸಾಂನಲ್ಲಿ ವರದಿಗಾರರ ಜತೆ ಮಾತನಾಡಿದ ಅವರು, ‘ಇಂಧನ ಬೆಲೆ ಹೆಚ್ಚಿಲ್ಲ, ಅದು ತೆರಿಗೆಗಳನ್ನು ಒಳಗೊಂಡಿದೆ. ನೀವು ಉಚಿತ ಲಸಿಕೆಯನ್ನು ಪಡೆಯಬೇಕೆಂದರೆ, ಅದಕ್ಕೆ ಹಣ ಎಲ್ಲಿಂದ ಬರುತ್ತದೆ? ಲಸಿಕೆಗೆ ನೀವು ಹಣ ಪಾವತಿಸಿಲ್ಲ. ಹಾಗಾಗಿ ತೆರಿಗೆ ಮೂಲಕ ಹಣ ಸಂಗ್ರಹಿಸಲಾಗಿದೆ’ ಎಂದು ಸಚಿವರು ಹೇಳಿದ್ದಾರೆ.

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24