ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.
ಕಾಪು: ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ವಿತರಿಸಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಹಳೇ ಮಾರಿಯಮ್ಮ ದೇವಸ್ಥಾನದ ಸ್ವಾಗತ ಗೋಪುರದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ, ಕಾಪು ಪೇಟೆಯನ್ನ ಸಾಗಿ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಸಿದರು.
ಎಬಿವಿಪಿ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ಭಂಡಾರಿ ಮಾತಾಡಿ ” ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತ ಪಾಸ್ ನೀಡಬೇಕು, ವಿಧ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುವುದನ್ನ ಸರ್ಕಾರ ಈ ಕೂಡಲೇ ನಿಲ್ಲಿಸಬೇಕು ಮತ್ತು ಹಾಸ್ಟೇಲ್ ಗಳ ಸಮಸ್ಯೆ ಹಾಗೂ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ ಮಾಡಬೇಕೆಂದು ಆಗ್ರಹಿಸಿದರು.ಸರ್ಕಾರ ನಮಗೆ ಸ್ಪಂದಿಸದೆ ಇದ್ದಲ್ಲಿ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.
ವಿಧ್ಯಾರ್ಥಿ ಪ್ರಮುಖರಾದ ಉಮೇಸ್ ಕಾಪು, ವಿನಿತ್ ಪೂಜಾರಿ, ರಂಜೀತ್ , ಪೂಜಾ, ಪ್ರಜ್ಞಾ,ಸೇರಿದಂತೆ ನೂರಾರು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…