Featured

ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು : ಮಾಧುಸ್ವಾಮಿ ಅಸಮಾಧಾನ – Vishwanews24

ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು : ಮಾಧುಸ್ವಾಮಿ ಅಸಮಾಧಾನ

ತುಮಕೂರು: “ಜನರು ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು” ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದರು.

ಇನ್ನು ಉಚಿತ ಭಾಗ್ಯ ಮುಂದುವರಿದರೆ ಚುನಾವಣೆ ಮಾಡುವುದು ತುಂಬಾ ಕಷ್ಟವಾಗುತ್ತೆ. ರಾಜ್ಯದ ತೆರಿಗೆದಾರರ ದುಡ್ಡು ಇಷ್ಟಬಂದ ಹಾಗೇ ಹಂಚುತ್ತೇನೆ ಅಂದರೇ ಮನೆಯಲ್ಲಿ ಕೂತವರಿಗೆ ಹಂಚುತ್ತೇನೆ ಅಂದ್ರೆ ರಾಜ್ಯದ ಪರಿಸ್ಥಿತಿ ಏನಾಗಬೇಡ ಎಂದಿದ್ದಾರೆ.

ದಾಸ್ತಾನು ಇರುವ ಅಕ್ಕಿ ಬರಗಾಲ, ಅತಿವೃಷ್ಟಿ ಸಂದರ್ಭದಲ್ಲಿ ನೀಡುತ್ತಾರೆ. ನಮ್ಮಲ್ಲಿ ಅಕ್ಕಿ ಇದೆ ಎಂದು ಹೇಳಿ ಬೇಕಾಬಿಟ್ಟಿ ಹಂಚೋಕಾಗುತ್ತಾ? ಕರ್ನಾಟಕಕ್ಕೆ ಅಂತಹ ಪರಿಸ್ಥಿತಿ ಬಂದರೇ ಮೋದಿ ಅಕ್ಕಿ ಕೊಟ್ಟೇ ಕೊಡುತ್ತಾರೆ ಎಂದು ಹೇಳಿದ್ದಾರೆ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago