ನವದೆಹಲಿ: “ಉಚಿತ ಲಸಿಕೆ ಸೇರಿದಂತೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಕೇಂದ್ರ ಇಂಧನ ಸಚಿವ ಹರ್‌ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ? ಎನ್ನುವುದು ಭಾರತದಲ್ಲಿ ನಾವು ಕೇಳಬಹುದಾದ ಸರಳ ರಾಜಕೀಯ ನಿರೂಪಣೆಯಾಗಿದೆ. ಈ ಕಾರಣದಿಂದ ಪ್ರತಿಭಾರಿ ಬೆಲೆ ಏರಿಕೆಯಾದ ಸಂದರ್ಭ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವ ಸ್ಥಿತಿಯನ್ನು ತಂದಿಡುತ್ತದೆ” ಎಂದು ಹೇಳಿದ್ದಾರೆ.
“ನಿನ್ನೆ ಶತಕೋಟಿ ಡೋಸ್ ಕೊರೊನಾ ಲಸಿಕೆ ವಿತರಣೆಯ ಗುರಿ ತಲುಪಿದ್ದೇವೆ. ಒಂದು ವರ್ಷ 90 ಕೋಟಿ ಮಂದಿಗೆ ಆಹಾರ ಪೂರೈಸಿದ್ದೇವೆ. ಉಜ್ವಲ ಯೋಜನೆಯನ್ನೂ ನೀಡಿದ್ದೇವೆ. ಕೇಂದ್ರ ಸರ್ಕಾರ ಹಲವು ಕಾರ್ಯಗಳು ಪ್ರತಿ ಲೀಟರ್‌ಗೆ ವಿಧಿಸಿರುವ 32 ರೂ. ತೆರಿಗೆಯಿಂದ ಸಾಧ್ಯವಾಗಿದೆ” ಎಂದಿದ್ದಾರೆ.
“ಬಡವರಿಗಾಗಿ ಮನೆ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ಸಮಾಜ ಕಲ್ಯಾಣ ಯೋಜನೆಗಾಗಿ ತೆರಿಗೆ ಹಣ ಬಳಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…