Featured

ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

ಉಚಿತ ಲಸಿಕೆ, ಇತರ ಯೋಜನೆಗಳಿಗೆ ಇಂಧನದ ಮೇಲಿನ ತೆರಿಗೆ ಹಣ ಬಳಕೆ : ಹರ್‌ದೀಪ್‌‌ ಸಿಂಗ್‌ ಪುರಿ – Vishwanews24

ನವದೆಹಲಿ: “ಉಚಿತ ಲಸಿಕೆ ಸೇರಿದಂತೆ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಉಚಿತ ಊಟ, ಅಡುಗೆ ಅನಿಲ ಹಾಗೂ ಇತರ ಯೋಜನೆಗಳಿಗಾಗಿ ಇಂಧನದ ಮೇಲೆ ವಿಧಿಸಿರುವ ತೆರಿಗೆಯಿಂದ ಸಂಗ್ರಹವಾಗುವ ಹಣವನ್ನು ಬಳಸಿಕೊಳ್ಳಲಾಗುತ್ತಿದೆ” ಎಂದು ಕೇಂದ್ರ ಇಂಧನ ಸಚಿವ ಹರ್‌ದೀಪ್‌‌ ಸಿಂಗ್‌ ಪುರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಲೆ ಏರಿಕೆಯಾಗುತ್ತಿದೆ. ನೀವು ತೆರಿಗೆ ಇಳಿಸುತ್ತಿಲ್ಲವೇಕೆ? ಎನ್ನುವುದು ಭಾರತದಲ್ಲಿ ನಾವು ಕೇಳಬಹುದಾದ ಸರಳ ರಾಜಕೀಯ ನಿರೂಪಣೆಯಾಗಿದೆ. ಈ ಕಾರಣದಿಂದ ಪ್ರತಿಭಾರಿ ಬೆಲೆ ಏರಿಕೆಯಾದ ಸಂದರ್ಭ ಅದು ನಮ್ಮ ಬುಡಕ್ಕೆ ನಾವೇ ಕೊಡಲಿ ಹಾಕಿಕೊಳ್ಳುವ ಸ್ಥಿತಿಯನ್ನು ತಂದಿಡುತ್ತದೆ” ಎಂದು ಹೇಳಿದ್ದಾರೆ.

“ನಿನ್ನೆ ಶತಕೋಟಿ ಡೋಸ್‌ ಕೊರೊನಾ ಲಸಿಕೆ ವಿತರಣೆಯ ಗುರಿ ತಲುಪಿದ್ದೇವೆ. ಒಂದು ವರ್ಷ 90 ಕೋಟಿ ಮಂದಿಗೆ ಆಹಾರ ಪೂರೈಸಿದ್ದೇವೆ. ಉಜ್ವಲ ಯೋಜನೆಯನ್ನೂ ನೀಡಿದ್ದೇವೆ. ಕೇಂದ್ರ ಸರ್ಕಾರ ಹಲವು ಕಾರ್ಯಗಳು ಪ್ರತಿ ಲೀಟರ್‌ಗೆ ವಿಧಿಸಿರುವ 32 ರೂ. ತೆರಿಗೆಯಿಂದ ಸಾಧ್ಯವಾಗಿದೆ” ಎಂದಿದ್ದಾರೆ.

“ಬಡವರಿಗಾಗಿ ಮನೆ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ಸಮಾಜ ಕಲ್ಯಾಣ ಯೋಜನೆಗಾಗಿ ತೆರಿಗೆ ಹಣ ಬಳಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

1 hour ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

1 hour ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

2 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

3 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

3 hours ago