ಬೆಂಗಳೂರು : ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಉಚಿತ ಸಾಮೂಹಿಕ ವಿವಾಹ – ಸಪ್ತಪದಿ’ ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಉಚಿತ ‘ಸಪ್ತಪದಿ ಸಾಮೂಹಿಕ ವಿವಾಹ’ ಯೋಜನೆಯನ್ನು ಪ್ರಾರಂಭಿಸಿತ್ತು. ವಧು ಮತ್ತು ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಗಳೇ ಮಾಡುವುದು ಈ ಯೋಜನೆಯ ವಿಶೇಷವಾಗಿದೆ.
ಕೋವಿಡ್ ಸಾಂಕ್ರಾಮಿಕದ ಹಿನ್ನಲೆಯಲ್ಲಿ ಸುಮಾರು ಎರಡು ವರ್ಷಗಳಿಂದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನಲೆಯಲ್ಲಿ, ಮತ್ತೆ ಸಾಮೂಹಿಕ ವಿವಾಹವನ್ನು ಪ್ರಾರಂಭಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಯಾವ ದಿನಾಂಕದಂದು ಉಚಿತ ಸಾಮೂಹಿಕ ಮದುವೆ ನಡೆಯಲಿದೆ.?
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಕೋವಿಡ್ ಕಾರಣವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಕಾರ್ಯಕ್ರಮಗಳಿಗೆ ಮರುಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಏಪ್ರಿಲ್ 28, 2022 ಮತ್ತು ಮೇ 11 ಮತ್ತು 25, 2022 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯವಾಗಿದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…