Featured

ಉಚ್ಚಿಲ : ಅಪರಿಚಿತ ವಾಹನ  ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು – vishwanews24

ಉಚ್ಚಿಲ : ಅಪರಿಚಿತ ವಾಹನ  ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಪಡುಬಿದ್ರಿ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಸೆಪ್ಟೆಂಬರ್ 30ರಂದು ನಡೆದಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪುತ್ತೂರು ನೋಂದಣಿಯ ಬೈಕ್‌ನಲ್ಲಿ ಮೃತರಾದವರು ಉಡುಪಿಯಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಸಮಾಜ ಸೇವಕ ಜಮಾಲುದ್ದೀನ್ ಉಚ್ಚಿಲ, ಹಮೀದ್ ಮೂಳೂರು, ರಯೀಸ್, ರಝಾಕ್, ಅನ್ವರ್ ಕೋಟೇಶ್ವರ ಮತ್ತು ಸಾದಿಕ್ ಪಡುಬಿದ್ರಿ ಅವರು ಮೃತದೇಹವನ್ನು ಶವಾಗಾರಕ್ಕೆ ಸಾಗಿಸುವಲ್ಲಿ ನೆರವು ನೀಡಿದರು.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

18 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

18 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

19 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

20 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago