ಉಚ್ಚಿಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಕಾಪು ವಿಧಾನ ಸಭಾ ಕ್ಷೇತ್ರ ವಲಯದ ವತಿಯಿಂದ ಸಾರ್ವಜನಿಕರಿ ಗಾಗಿ ಉಚ್ಚಿಲದಲ್ಲಿ ಉಚಿತ ಅಂಬುಲೆನ್ಸ್ ಲೋಕಾರ್ಪಣೆ ಸಮಾರಂಭ ನಡೆಯಿತು.
ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಯು. ಸೀತಾರಾಂ ಭಟ್ ಮಾತನಾಡಿ, ಜಾತಿ, ಧರ್ಮವು ನಾವು ಮಾಡಿಕೊಂಡ ಚೌಕಟ್ಟು. ಎಲ್ಲಾ ಧರ್ಮದ ಮೂಲ ಸಾರ ಕರುಣೆ, ತಾಳ್ಮೆ, ಸಹನೆಯ ಸಂದೇಶ ನೀಡುತ್ತದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ರಾಷ್ಟ್ರಿಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಮಾತನಾಡಿ, ಪ್ರೀತಿ, ಸಹೋದರತೆ, ಅನ್ಯೋನ್ಯತೆ, ಮಮತೆ, ಶಾಂತಿ, ತ್ಯಾಗಕ್ಕಾಗಿ ಸಂಸ್ಥೆ ಮುಂದಾಗಿದೆ ಎಂದರು.
ವೇದಿಕೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಎರ್ಮಾಳು ಜಾಮಿಶಾ ಮಸೀದಿಯ ಖತೀಬರಾದ ಶಬ್ಬೀರ್ ಫೈಝಿ, ಎರ್ಮಾಳು ಚರ್ಚ್ನ ಧರ್ಮಗುರುಗಳಾದ ಲಾರೆನ್ಸ್ ರಾಡ್ರಿಗಸ್, ಉಡುಪಿ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ ಡಿ. ಸಾಲ್ಯಾನ್, ಮಹಮ್ಮದ್ ಇಕ್ಬಾಲ್, ಮಜೀದ್ ಪೊಲ್ಯ, ಹನೀಫ್ ಮೂಳೂರು, ಅಬ್ರಾರ್ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…