Featured

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ

ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  : ಮುಖ್ಯಮಂತ್ರಿ ಘೋಷಣೆ

ಉಚ್ಚಿಲ: ರಾಜ್ಯ ಸರಕಾರ ಕರಾವಳಿ ಕರ್ನಾಟಕವನ್ನು ‘ವಿಶ್ವ ದರ್ಜೆಯ ಟೂರಿಸಂ ಹಬ್’ ಆಗಿ ಅಭಿವೃದ್ಧಿ ಪಡಿಸಲಿದ್ದು, ಇದಕ್ಕಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಿಗೆ ಪ್ರತ್ಯೇಕ ಟೂರಿಸಂ ಪಾಲಿಸಿ (ನೀತಿ)ಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಕಾಪು ತಾಲೂಕಿನ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿರುವ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2026ರಲ್ಲಿ ಗುರುವಾರ ಸಂಜೆ ಮಹಿಳಾ ದಸರಾವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಾಜ್ಯದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯದ 320 ಕಿ.ಮೀ. ಉದ್ದದ ಕರಾವಳಿ ಪ್ರದೇಶವಿದೆ. ಇದು ಪರಂಪರೆ ಹಾಗೂ ಐತಿಹಾಸಿಕ ಮಹತ್ವವನ್ನು ಹೊಂದಿರುವ ಪ್ರದೇಶವಾಗಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳನ್ನು ಸೇರಿಸಿ ವಿಶ್ವದರ್ಜೆಯ ಟೂರಿಸಂ ಹಬ್ ಆಗಿ ಇದನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಇದನ್ನೂ ಓದಿ :

ಇಲ್ಲಿ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಿ, ಸ್ಥಳೀಯ ಯುವಕರಿಗೆ ಇಲ್ಲೇ ಉದ್ಯೋಗಾವಕಾಶಗಳನ್ನು ಒದಗಿಸಿ, ಅವರು ಉದ್ಯೋಗಕ್ಕಾಗಿ ಹೊರ ರಾಜ್ಯ ಹಾಗೂ ಹೊರದೇಶಗಳಿಗೆ ವಲಸೆ ಹೋಗದಂತೆ ನೋಡಿಕೊಳ್ಳಲಾಗುವುದು. ಇದಕ್ಕಾಗಿ ಈ ಪ್ರದೇಶಕ್ಕೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸಲಾಗುವುದು ಎಂದರು.

ಇಲ್ಲಿನ ಆರ್ಥಿಕ ಪ್ರಗತಿಗೆ ಬೇಕಾದ ಅವಕಾಶಗಳನ್ನು ಪ್ರೋತ್ಸಾಹಿಸುವ ಮೂಲಕ ಕರಾವಳಿ ಕರ್ನಾಟಕದ ಇಲ್ಲಿನ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಲು ಬೇಕಾದ ವ್ಯವಸ್ಥೆ ಕಲ್ಪಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದರು.

‘ಕರಾವಳಿ ಎಂಬುದು ಪವಿತ್ರ ಭೂಪ್ರದೇಶವಾಗಿದೆ. ಹೇಗೆ ಅಲೆಗಳಿಲ್ಲದೇ ಸಮುದ್ರಕ್ಕೆ ಯಾವುದೇ ಮೌಲ್ಯ ಇರುವುದಿಲ್ಲವೋ ಅದೇ ರೀತಿ ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ.’ ಎಂದು ಮುಖ್ಯಮಂತ್ರಿಗಳು ಕರಾವಳಿಯ ಬಾಯ್ತುಂಬ ಹೊಗಳಿದರು.

ಇದನ್ನೂ ಓದಿ :

ರಾಜ್ಯ ಸರಕಾರ ಇಲ್ಲಿನ ಟೆಂಪಲ್ ಟೂರಿಸಂನ್ನು ಪ್ರೋತ್ಸಾಹಿಸಲು ಬೇಕಾದ ಯೋಜನೆಯನ್ನು ರೂಪಿಸುತ್ತಿದೆ. ಟೂರಿಸಂ ಪಾಲಿಸಿ ಕುರಿತು ಸಮಾಲೋಚನೆಗೆ, ಚರ್ಚೆಗೆ ಶೀಘ್ರದಲ್ಲೇ ಮಂಗಳೂರಿನಲ್ಲಿ ಸಭೆಯೊಂದನ್ನು ಕರೆಯಲಾಗುವುದು ಎಂದರು.

ತುಳುವಿನಲ್ಲಿ ಶುಭಾಶಯ ಕೋರಿ ತಮ್ಮ ಭಾಷಣ ಪ್ರಾರಂಭಿಸಿದ ಡಿಕೆಶಿ, ಇಲ್ಲಿಗೆ ಉಪಮುಖ್ಯಮಂತ್ರಿಯಾಗಿ ಬಂದು ದೇವಿಯ ಆಶೀರ್ವಾದ ಪಡೆದಿದ್ದೆ. ಈಗ ಮುಖ್ಯಮಂತ್ರಿಯಾಗಿ ಪ್ರಜಾ ಸೇವಕನಾಗಿ ಬಂದಿದ್ದು, ದೇವಿಯ ದರ್ಶನ ಪಡೆದಿದ್ದೇನೆ ಎಂದರು.

Vishwa News 24

Recent Posts

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

28 minutes ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

39 minutes ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago