ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಪಾದಚಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಯೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಅವರ ಮೃತ ದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕುಮಾರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…