ಕಾಪು : ಮಹಾರಾಷ್ಟ್ರದಿಂದ ಬಂದು 14 ದಿನ ಕ್ವಾರೆಂಟೈನ್ಗೆ ಒಳಪಟ್ಟು ಮನೆಗೆ ಬಂದ ವ್ಯಕ್ತಿಗೆ ಸೋಂಕು ದೃಢವಾದ ವರದಿ ಬಂದ ಹಿನ್ನೆಲೆ ಉಚ್ಚಿಲ ಪೊಲ್ಯ ರಸ್ತೆಯಲ್ಲಿರುವ ಅವರ ವಾಸದ ಅಪಾರ್ಟ್ಮೆಂಟ್ ಸೀಲ್ಢೌನ್ ಮಾಡಲಾಗಿದೆ.ಆದರೆ ಇದುವರೆಗೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿಲ್ಲ.ಅಲ್ಲದೆ ಅವರಿಗೆ ನಿನ್ನೆ ರಾತ್ರಿಯಿಂದ ಹೊಟ್ಟೆಗೆ ಅನ್ನ ಅಹಾರ ನೀಡಿಲ್ಲ.ನಮ್ಮನ್ನು ಸ್ಥಳೀಯ ಗ್ರಾ.ಪಂ ಅಧಿಕಾರಿಗಳು ನೋಡಲು ಬಂದಿಲ್ಲ ಎಂದು ಅವರ ಪತ್ನಿ ಆರೋಪಿಸಿದ್ದಾರೆ.ಇಲಾಖೆಯ ಮಾಹಿತಿಯಂತೆ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿರುವುದಾಗಿ ಪತ್ರಿಕೆಯಲ್ಲಿ ವರದಿಯಾಗಿತ್ತು.
ಈ ಬಗ್ಗೆ ಮಾತನಾಡಿದ ಸ್ಥಳೀಯ ತಾ.ಪಂ ಸದಸ್ಯ ಶೇಖಬ್ಬ, ನಿನ್ನೆಯಿಂದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿಲ್ಲ.ಅವರಿಗೆ ಅಹಾರದ ವ್ಯವಸ್ಥೆಯನ್ನು ಮಾಡಿಲ್ಲ . ನಮಗೆ ಬೆಳಿಗ್ಗೆ ವಿಷಯ ಸಿಕ್ಕಿದ ಕೂಡಲೇ ನಾವು ಬೆಳಿಗ್ಗಿನ ಉಪಹಾರ ನೀಡಿದ್ದೇವೆ.ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದಿದ್ದಾರೆ.
ಕಾಪು ತಹಶೀಲ್ದಾರ್ ಮಹಮ್ಮದ್ ಇಸಾಕ್ ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತ ಪಡಿಸಿ, ನಾವು ಆ ಸೋಂಕಿತರಿರುವ ಮನೆಯನ್ನು ಸೀಲ್ ಡೌನ್ ಮಾಡಿದ್ದೇವೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಬಿ.ಬಿ. ರಾವ್ ಗೆ ಈ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದ್ದೇವೆ. ನಿನ್ನೆಯೇ ಸಾಗಿಸ ಬೇಕಾಗಿದ್ದು ಈ ಬಗ್ಗೆ ವಿಚಾರಿಸುತ್ತೇನೆ ಎಂದಿದ್ದಾರೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…