ಕಾಪು, ಫೆ. 11 : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ನಿರ್ಮಾಣದ ವಿಚಾರದಲ್ಲಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಸ್ಥಳೀಯರು ಮತ್ತು ಹೈವೇ ಗುತ್ತಿಗೆದಾರರ ನಡುವೆ ಘರ್ಷಣೆ ನಡೆದಿದೆ.
ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸರ್ವಿಸ್ ರಸ್ತೆ ರಚನೆಗಾಗಿ ಅನಧಿಕೃತ ಗೂಡಂಗಡಿ ಮತ್ತು ಕಟ್ಟಡಗಳ ತೆರವಿಗೆ ಜೆಸಿಬಿ ಸಹಿತವಾಗಿ ಹೆದ್ದಾರಿ ಗುತ್ತಿಗೆದಾರ ಕಂಪನಿಯು ಆಗಮಿಸಿದ್ದು ಅಂಗಡಿಗಳ ಮಾಲಕರು ಕಾಮಗಾರಿಗೆ ತಡೆಯೊಡ್ಡುವ ಪ್ರಯತ್ನ ನಡೆಸಿದರು.
ಕೆಲವು ಅಂಗಡಿಯವರು ತಮ್ಮ ಗೂಡಂಗಡಿಗಳ ತೆರವಿಗೆ ಸಮ್ಮತಿ ಸೂಚಿಸಿದ ಬಳಿಕ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು ತೆರವು ಗೊಳಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ನವಯುಗ್ ಕಂಪೆನಿಯ ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ರೈ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉಚ್ಚಿಲದಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಎರಡೂ ಬದಿಯಲ್ಲಿ 30 ಮೀಟರ್ ಅಗಲದವರೆಗೆ ಹೆದ್ದಾರಿ ಇಲಾಖೆಯು ಸ್ವಾಧೀನ ಪಡಿಸಿ ಕೊಂಡಿರುವ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಎಸ್ಸೈ ದಿಲೀಪ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…