Featured

ಉಚ್ಚಿಲ: ಚರಂಡಿಗೆ ಬಿದ್ದು ಒದ್ದಾಡಿದ ಕಾಡುಕೋಣ ರಕ್ಷಣೆ  – vishwanews24

ಉಚ್ಚಿಲ: ಚರಂಡಿಗೆ ಬಿದ್ದು ಒದ್ದಾಡಿದ ಕಾಡುಕೋಣ ರಕ್ಷಣೆ

ಕಾಪು: ಕಾಡು ಬಿಟ್ಟು ನಾಡಿಗೆ ಬಂದು ಚರಂಡಿಗೆ ಬಿದ್ದು ಹೊರಬರಲಾಗದೇ ಒದ್ದಾಡಿದ ಕಾಡುಕೋಣವನ್ನು ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.

ಸುಮಾರು ಆರು ವರ್ಷ ಪ್ರಾಯದ ಕಾಡುಕೋಣ ಸೋಮವಾರ ರಾತ್ರಿ ಮಹಾಲಕ್ಷ್ಮೀ ದೇವಸ್ಥಾನದ ಬಳಿಯ ಚರಂಡಿ ಹೊಂಡಕ್ಕೆ ಬಿದ್ದಿದ್ದು ಹೊರ ಬರಲಾಗದೇ ಒದ್ದಾಡಿದೆ. ಅದನ್ನು ಗಮನಿಸಿದ ದೇವಸ್ಥಾನದ ಸಿಬಂದಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅವರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡುಕೋಣವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ಆರಂಭಿಸಿದರು. ಸಹಾಯಕ ಅರಣ್ಯ ಸಂಕ್ಷರಣಾಧಿಕಾರಿ ಕ್ಲಿಫರ್ಡ್‌ ಲೋಬೋ, ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ, ಗುರುರಾಜ್‌ ಕೆ., ಗಸ್ತು ಅರಣ್ಯಾಧಿಕಾರಿಗಳಾದ ಅಭಿಲಾಷ್‌, ಮಂಜುನಾಥ್‌ ನಾಯಕ್‌, ಚರಣ್‌ ಜೋಗಿ, ಚಾಲಕ ಜಾಯ್‌ ಮುತುವರ್ಜಿಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಿಬಂದಿ ಸಹಕರಿಸಿದ್ದರು.

ಕಾಡುಕೋಣ ಸಂಪೂರ್ಣ ಹೆದರಿದ್ದು ಹಗಲಿನಲ್ಲಿ ಕಾರ್ಯಾಚರಣೆ ನಡೆಸಿದರೆ ಜನರಿಗೆ ತೊಂದರೆಯಾಗುವ ಭೀತಿಯಿಂದ ರಾತ್ರಿ ವೇಳೆಯಲ್ಲಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಗಿದೆ. ಜೆಸಿಬಿ ಮೂಲಕ ಹೊಂಡದ ಸುತ್ತಲಿನ ಮಣ್ಣನ್ನು ಬದಿಗೆ ಸರಿಸಿ ಕಾಡುಕೋಣಕ್ಕೆ ಮೇಲಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ ಎಂದು ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago