ಕಾಪು: ಕಾಡು ಬಿಟ್ಟು ನಾಡಿಗೆ ಬಂದು ಚರಂಡಿಗೆ ಬಿದ್ದು ಹೊರಬರಲಾಗದೇ ಒದ್ದಾಡಿದ ಕಾಡುಕೋಣವನ್ನು ಸಕಾಲಿಕ ಕಾರ್ಯಾಚರಣೆ ಮೂಲಕ ರಕ್ಷಿಸಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಸುಮಾರು ಆರು ವರ್ಷ ಪ್ರಾಯದ ಕಾಡುಕೋಣ ಸೋಮವಾರ ರಾತ್ರಿ ಮಹಾಲಕ್ಷ್ಮೀ ದೇವಸ್ಥಾನದ ಬಳಿಯ ಚರಂಡಿ ಹೊಂಡಕ್ಕೆ ಬಿದ್ದಿದ್ದು ಹೊರ ಬರಲಾಗದೇ ಒದ್ದಾಡಿದೆ. ಅದನ್ನು ಗಮನಿಸಿದ ದೇವಸ್ಥಾನದ ಸಿಬಂದಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅವರು ಮಂಗಳವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡುಕೋಣವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ಆರಂಭಿಸಿದರು. ಸಹಾಯಕ ಅರಣ್ಯ ಸಂಕ್ಷರಣಾಧಿಕಾರಿ ಕ್ಲಿಫರ್ಡ್ ಲೋಬೋ, ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್ ಶೆಟ್ಟಿ, ಗುರುರಾಜ್ ಕೆ., ಗಸ್ತು ಅರಣ್ಯಾಧಿಕಾರಿಗಳಾದ ಅಭಿಲಾಷ್, ಮಂಜುನಾಥ್ ನಾಯಕ್, ಚರಣ್ ಜೋಗಿ, ಚಾಲಕ ಜಾಯ್ ಮುತುವರ್ಜಿಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸಿಬಂದಿ ಸಹಕರಿಸಿದ್ದರು.
ಕಾಡುಕೋಣ ಸಂಪೂರ್ಣ ಹೆದರಿದ್ದು ಹಗಲಿನಲ್ಲಿ ಕಾರ್ಯಾಚರಣೆ ನಡೆಸಿದರೆ ಜನರಿಗೆ ತೊಂದರೆಯಾಗುವ ಭೀತಿಯಿಂದ ರಾತ್ರಿ ವೇಳೆಯಲ್ಲಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಗಿದೆ. ಜೆಸಿಬಿ ಮೂಲಕ ಹೊಂಡದ ಸುತ್ತಲಿನ ಮಣ್ಣನ್ನು ಬದಿಗೆ ಸರಿಸಿ ಕಾಡುಕೋಣಕ್ಕೆ ಮೇಲಕ್ಕೆ ಬರಲು ಅವಕಾಶ ಮಾಡಿಕೊಡಲಾಗಿದೆ ಎಂದು ಉಪವಲಯ ಅರಣ್ಯಾಧಿಕಾರಿ ಜೀವನ್‌ದಾಸ್ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…