Featured

ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ – vishwanews24

ಉಚ್ಚಿಲ ದಸರಾ ಮಹೋತ್ಸವ : ಸೆ. 27 ರಂದು ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ : : ಯಶ್ಪಾಲ್ ಸುವರ್ಣ

ಉಡುಪಿ: ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2025 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ಶನಿವಾರ ಬೆಳಿಗ್ಗೆ 9.30ಕ್ಕೆ ಉಚ್ಚಿಲ ಮೊಗವೀರ ಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದೆ.

ಚಿತ್ರ ಬಿಡಿಸುವ ಸ್ಪರ್ಧೆಯ ಚಿತ್ರ ರಚನೆಯ ವಿಷಯವಾಗಿ ನಾಡ ಹಬ್ಬ ದಸರಾವನ್ನು ಆಯ್ಕೆ ಮಾಡಿದ್ದು, ಸ್ಪರ್ಧಿಗಳು ಈ ವಿಷಯಕ್ಕೆ ಸಂಬಂಧಿಸಿದ ಚಿತ್ರವನ್ನು ಬಿಡಿಸಬೇಕು. ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಿದ್ದು ಕಿರಿಯರ ವಿಭಾಗ (1 ರಿಂದ 4ನೇ ತರಗತಿ), ಪ್ರಾಥಮಿಕ ವಿಭಾಗ ( 5 ರಿಂದ 7 ನೇ ತರಗತಿ), ಹೈಸ್ಕೂಲ್ ವಿಭಾಗ (8 ರಿಂದ 10ನೇ ತರಗತಿ), ಕಾಲೇಜು ವಿಭಾಗ (ಪದವಿ ಪೂರ್ವ ಮತ್ತು ಪದವಿ ತರಗತಿ) ಹಾಗೂ ಸಾರ್ವಜನಿಕ ವಿಭಾಗದಲ್ಲಿ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧಾಳುಗಳಿಗೆ ಡ್ರಾಯಿಂಗ್ ಶೀಟ್ ಸ್ಥಳದಲ್ಲೇ ಒದಗಿಸಲಿದ್ದು, ಉಳಿದ ಪರಿಕರಗಳನ್ನು ಅವರೇ ತರತಕ್ಕದ್ದು.

ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡಲಿದ್ದು, ವಿಜೇತರಿಗೆ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು.

ಮಧ್ಯಾಹ್ನ 2 ಗಂಟೆಗೆ ಶ್ರೀಮತಿ ಶಾಲಿನಿ ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ಆಯೋಜಿಸಿದ್ದು, ಗುಂಪು ವಿಭಾಗದಲ್ಲಿ ಪ್ರಥಮ ಬಹುಮಾನ 30,000, ದ್ವಿತೀಯ ಬಹುಮಾನ 20,000, ತೃತೀಯ ಬಹುಮಾನ 15,000 ಹಾಗೂ ವೈಯುಕ್ತಿಕ ವಿಭಾಗದಲ್ಲಿ ಪ್ರಥಮ 6,000, ದ್ವಿತೀಯ 4,000, ತೃತೀಯ 3,000 ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಲು ಆನ್ಲೈನ್ ನೋಂದಣಿಗಾಗಿ ಹಾಗೂ ಸ್ಫರ್ಧೆಯ ವಿವರಗಳು ಮಹಾಲಕ್ಷ್ಮೀ ಬ್ಯಾಂಕಿನ ವೆಬ್ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು ಆನ್ಲೈನ್ ಮೂಲಕ ನೋದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 9972120332 ಸಂಪರ್ಕಿಸಬಹುದು. ಸಾರ್ವಜನಿಕರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

24 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago