Featured

ಉಚ್ಚಿಲ ದಸರಾ 2024 – ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್‌ ಶೋ ಪ್ರದರ್ಶನ – vishwanews24

ಅ.3 -12 :ಉಚ್ಚಿಲ ದಸರಾ 2024 –  ಪ್ರತೀ ದಿನ ಸಾಂಸ್ಕೃತಿಕ ಕಲರವ ; ವಿಶೇಷ ಲೇಸರ್‌ ಶೋ ಪ್ರದರ್ಶನ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತರ ಸಹಕಾರದೊಂದಿಗೆ ಶಾಲಿನಿ ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ -ನೃತ್ಯ ಸ್ಪರ್ಧೆ : ಅ.3ರ ಸಂಜೆ 6.30ರಿಂದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರಕಲಿದೆ.

ಅ. 4ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಲೈವ್‌ ಹಿನ್ನೆಲೆ ಸಂಗೀತ ವಾದನದೊಂದಿಗೆ ನಾಟ್ಯ ನಿಲಯಂ ಮಂಜೇಶ್ವರ ತಂಡದವರಿಂದ ನೃತ್ಯ ವೈವಿಧ್ಯ,

ಅ. 5ರ ಸಂಜೆ ಗಂಟೆ 6.15ರಿಂದ
ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಭಜನ ಕುಣಿತ, ರಾತ್ರಿ 7.30ರಿಂದ ಜಿಲ್ಲಾ ಮೊಗವೀರ ಯುವ ಸಂಘಟನೆ ಸದಸ್ಯರಿಂದ
ಸಾಂಸ್ಕೃತಿಕ ಕಾಯಕ್ರಮ, ರಾತ್ರಿ 8.30ರಿಂದ ಗುರು ಕೌಸಲ್ಯ ನಿವಾಸ್‌ ಮತ್ತು ಬಳಗ, ಎಂ. ಎಸ್‌. ನಾಟ್ಯಕ್ಷೇತ್ರ ಬೆಂಗಳೂರು ಇವರಿಂದ ಶ್ರೀರಾಮ ಹನುಮಂತ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಸಾಮೂಹಿಕ ದಾಂಡಿಯಾ: ಅ. 6ರ ಸಂಜೆ 6.30ರಿಂದ 8ರ ತನಕ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಸಾಮೂಹಿಕ ದಾಂಡಿಯಾ ನೃತ್ಯ, ರಾತ್ರಿ 8ರಿಂದ ಮೆಗಾ ಮ್ಯಾಜಿಕ್‌ ಸ್ಟಾರ್‌ ಕುದ್ರೋಳಿ ಗಣೇಶ್‌ ಅವರಿಂದ ವಿಸ್ಮಯ ಜಾದೂ, ಅ. 7ರ ಸಂಜೆ 4ರಿಂದ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ಅವರಿಂದ ಶತವೀಣಾವಲ್ಲರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಜ್ಞಾನ ಐತಾಳ್‌ ನೇತೃತ್ವದ ಹೆಜ್ಜೆನಾದ ಮಂಗಳೂರು ಇವರಿಂದ ನೃತ್ಯ

ಯಕ್ಷಗಾನ, ನೃತ್ಯ, ಹರಿಕಥೆ:
ಅ. 8ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ
ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಯಕ್ಷ ಕಲಾ ತಂಡ ಇವರಿಂದ ಚಕ್ರ ಚಂಡಿಕೆ ಯಕ್ಷಗಾನ,

ಅ. 9ರ ಮಧ್ಯಾಹ್ನ 2ರಿಂದ ಯಶಸ್ವಿನಿ ಉಳ್ಳಾಲ್‌ ಅವರಿಂದ ಗಾನ ಲಹರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವಿ ನೃತ್ಯಾರಾಧನ ಕಲಾಕೇಂದ್ರ ಪುತ್ತೂರು ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್‌ ಶಿಷ್ಯೆಯರಿಂದ ನೃತ್ಯ ರಂಜನಿ,

ಅ. 10ರ ಸಂಜೆ 6.30ರಿಂದ ಖ್ಯಾತ ಕೀರ್ತನಕಾರ ಡಾ| ಎಸ್‌.ಪಿ. ಗುರುದಾಸ್‌ ಮಂಗಳೂರು ಅವರಿಂದ ಹರಿಕಥಾ ಸತ್ಸಂಗ ಲಕ್ಷ್ಮೀ ಕಲ್ಯಾಣ ನಡೆಯಲಿದೆ.

ಅಜಯ್‌ ವಾರಿಯರ್‌ ನೇತೃತ್ವದಲ್ಲಿ ಸಂಗೀತ ಸಂಜೆ ಅ. 11ರ ಸಂಜೆ 6.30ರಿಂದ ಕಲಾಮೃತ ತಂಡ ಮಂಗಳೂರು ಅವರಿಂದ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು
ಇವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ,

ಅ. 12ರ ಬೆಳಗ್ಗೆ 11.30ರಿಂದ ವಿದುಷಿ ಡಾ| ಸುಚಿತ್ರ ಹೊಳ್ಳ ಪುತ್ತೂರು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಅ. 12ರಂದು ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ಶೋಭಾಯಾತ್ರೆ ಮತ್ತು ಜಲಸ್ತಂಭನೆ

ಪ್ರಯುಕ್ತ ರಾತ್ರಿ 10 ಗಂಟೆಗೆ ಕಾಪು ಬೀಚ್‌ ನಲ್ಲಿ ಲೈವ್‌ ಮ್ಯೂಸಿಕ್‌ ಶೋ ಮತ್ತು ವಿಶೇಷ ಲೇಸರ್‌ ಶೋ ಪ್ರದರ್ಶನ ನಡೆಯಲಿದೆ

ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್‌ ಸುವರ್ಣ, ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ್‌ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

14 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

15 hours ago