Featured

ಉಚ್ಚಿಲ ದಸರಾ  2024 : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನೆ – vishwanews24

ಉಚ್ಚಿಲ ದಸರಾ  2024 : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತ ಏಕಕಾಲದಲ್ಲಿ ನಡೆದ ಸಾಮೂಹಿಕ ವೈಭವದ  ಕುಣಿತ ಭಜನೆ

ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 3 ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024ರ ಅಂಗವಾಗಿ ಕ್ಷೇತ್ರದ ಪ್ರಾಂಗಣದ ಸುತ್ತ ನಡೆದ ಸಾಮೂಹಿಕ ಕುಣಿತ ಭಜನೆ ಭಕ್ತಿ ಭಾವದ ಪರಾಕಾಷ್ಠೆಗೆ ಸಾಕ್ಷಿಯಾಯಿತು

ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ರಥಬೀದಿಯ ಸುತ್ತಲೂ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನೆ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50ಕ್ಕೂ ಅಧಿಕ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್‌ ಅವರು ಭಜನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕ್ಷೇತ್ರದ ಪ್ರಧಾನ ಅರ್ಚಕ ವೇ| ಕೆ.ವಿ. ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಪ್ರಮುಖರಾದ ವಾಸುದೇವ ಸಾಲ್ಯಾನ್‌, ಗುಂಡು ಅಮೀನ್‌ ಮೊದಲಾದವರಿದ್ದರು.

ಸುನೀಲ್‌ ಸಾಲ್ಯಾನ್‌ ಮುಕ್ಕ ಅವರ ನಿರ್ಹಹಣೆಯಲ್ಲಿ ಜರಗಿದ ಕುಣಿತ ಭಜನಾ ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆದಿದೆ. ಭಜನಾ ತಂಡಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

24 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

34 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

46 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

59 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago