Featured

ಉಚ್ಚಿಲ ಬಡಾ ಗ್ರಾಮದಲ್ಲಿ ವಿನಯ ಕುಮಾರ್ ಸೊರಕೆ ಸಮ್ಮುಖದಲ್ಲಿ ಕರಾವಳಿ ಭಾಗದ 300ರಕ್ಕೂ ಅಧಿಕ ಮೀನುಗಾರರು ಕಾಂಗ್ರೆಸ್ ಸೇರ್ಪಡೆ – Vishwanews24

ಉಚ್ಚಿಲ ಬಡಾ ಗ್ರಾಮದಲ್ಲಿ ವಿನಯ ಕುಮಾರ್ ಸೊರಕೆ ಸಮ್ಮುಖದಲ್ಲಿ ಕರಾವಳಿ ಭಾಗದ 300ರಕ್ಕೂ ಅಧಿಕ ಮೀನುಗಾರರು ಕಾಂಗ್ರೆಸ್ ಸೇರ್ಪಡೆ

ಉಡುಪಿ: ಕಡಲತಡಿಯ ಈ ಭಾಗದಲ್ಲಿ ಮೀನುಗಾರರು ಬಹಳಷ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಭಾಗದಲ್ಲಿ ಇಷ್ಟೊಂದು ಜನರು ಸೇರಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಚುನಾವಣಾ ಇತಿಹಾಸದಲ್ಲಿ ಇದೇ ಮೊದಲು ಅಂತಾ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ಕಡಲ ತಡಿಯ ಉಚ್ಚಿಲ ಬಡಾ ಗ್ರಾಮದಲ್ಲಿ ವಿನಯ ಕುಮಾರ್ ಸೊರಕೆ ಸಮ್ಮುಖದಲ್ಲಿ ಕರಾವಳಿ ಭಾಗದ 300ರಕ್ಕೂ ಮಿಕ್ಕ ಮೀನುಗಾರರ ಮುಖಂಡರು ಹಾಗೂ ಯುವಕ ಯುವತಿಯರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೊಗವೀರರನ್ನು ಕೇವಲ‌ ಓಟ್ ಬ್ಯಾಂಕ್ ಆಗಿ ನಡೆಸಿಕೊಂಡ ಬಿಜೆಪಿ ಸರ್ಕಾರ ಬಹಳಷ್ಟು ಸೌಲಭ್ಯದಿಂದ ವಂಚಿತರನ್ನಾಗಿ ಮಾಡಿದೆ.ಕರಾವಳಿ ಭಾಗದ ಅಭಿವ್ರದ್ಧಿಗಾಗಿ ಕಾಂಗ್ರೆಸ್ ಈ ಬಾರಿ ವಿಶೇಷ ಅನುದಾನವನ್ನು, ವಿಶೇಷ ಪ್ರಣಾಳಿಕೆಯನ್ನು ಜಾರಿ ಮಾಡುವ ಪ್ರಾಮಾಣಿಕ ಭರವಸೆಯನ್ನು ನೀಡಿದೆ. ಭರಪೂರ ಕೊಡುಗೆಯನ್ನು ಕಾಂಗ್ರೆಸ್ ಈ ಬಾರಿ ಕರಾವಳಿ ಭಾಗಕ್ಕೆ ನೀಡುವ ವಾಗ್ದಾನವನ್ನು ಮಾಡಿದೆ.‌ಅದರ ಸಂಪೂರ್ಣ ಜವಬ್ದಾರಿ ನನ್ನ ಹೆಗಲಮೇಲಿದೆ. ಅಂತಾ ಸೊರಕೆ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ ಅಮೀನ್, ದೀಪಕ್ ಎರ್ಮಳ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಶೇಖಬ್ಬಾ ಅವರ ನೇತ್ರತ್ವದಲ್ಲಿ ಬಹಳಷ್ಟು ಮಂದಿ ಇಳಿಹೊತ್ತಿನಲ್ಲಿ ಕಾಂಗ್ರೆಸ್ ಸೇರ್ಪಡೆ ಯಾದರು.

ಮೊಗವೀರ ಮುಖಂಡರಾದ ಸುಕುಮಾರ್ ಬಂಗೇರ, ರೂಪೇಶ್ ಮೆಂಡನ್, ಜೀವನ್ ಮೆಂಡನ್, ಆನಂದ್ ತಿಂಗಳಾಯ, ಅನಿಶ್, ಯಶ್ವಂತ್ ಬಂಗೇರ, ಉಮೇಶ್ ಪೂಜಾರಿ, ದಯಾನಂದ ಕೋಟ್ಯಾನ್ ,ಶಿವಣ್ಣ ಬಂಗೇರ, ಲಕ್ಷ್ಮಣ್ ಗುರಿಕಾರ ಸೇರ್ಪಡೆಯ ನೇತ್ರತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸುಕುಮಾರ್ ಬಂಗೇರರವರು ವಿನಯಕುಮಾರ್ ಸೊರಕೆಯವರ ಗೆಲುವಿಗೆ ಎಲ್ಲರೂ ಸೇರಿ ಹಗಲಿರುಳು ಶ್ರಮಿಸುವುದಾಗಿ ಭರವಸೆ ನೀಡಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

3 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 hours ago