ಉಚ್ಚಿಲ : ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಮೊದಲಿಗೆ ಕ್ಷೇತ್ರದೊಳಗೆ ಆಗಮಿಸಿ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಮಾತನಾಡಿದ ಅವರು ‘ಮಹಾಲಕ್ಷ್ಮೀ ಹೆಸರಿನಲ್ಲಿಯೇ ಶಕ್ತಿ ಇದೆ. ಮಹಾಲಕ್ಷ್ಮೀ ಕೃಪೆ ಆದವರು ಬದುಕಿನಲ್ಲಿ ಅತ್ಯಂತ ಯಶಸ್ವಿ ಆಗುತ್ತಾರೆ’ ಎಂದರು.
ಸಾಹಸ ಅನ್ನುವುದು ಕರಾವಳಿ ಜನರ ಗುಣಧರ್ಮ ಆಗಿದೆ. ಮೊಗವೀರರದ್ದು ಸಾಹಸವೇ ಗುಣಧರ್ಮವಾಗಿದೆ. ಮೊಗವೀರರು ಕಠಿಣಪರಿಶ್ರಮಿಗಳು ಎಂದರು.
ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ,ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಘೋಷಣೆ ಮಾಡಿದರು. ಮೂರು ಜಿಲ್ಲೆಗಳಿಗೆ 5 ಸಾವಿರ ಮನೆ ನೀಡುತ್ತೇವೆ. ಎಲ್ಲ ಬಂದರಿನ ಡಬ್ಬಿಂಗ್ ( ಹೂಳೆತ್ತುವ) ಕೆಲಸ ಮಾಡುತ್ತೇವೆ. ಮಹಾಲಕ್ಷ್ಮಿ ದೇವಸ್ತಾನಕ್ಕೆ 5 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದರು. ಹಾಗೆಯೇ ಮೊಗವೀರ ಮಕ್ಕಳಿಗೆ ಹಿಂದುಳಿದ ವರ್ಗಗಳ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಮೀನುಗಾರರಿಗೆ 10 ತಿಂಗಳಿಗೆ ಎರಡು ಲಕ್ಷ ಲೀ. ಸಬ್ಸಿಡಿ ಡೀಸೆಲ್ ನೀಡುತ್ತೇವೆ. ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿಯೂ ಘೋಷಿಸಿದರು. ದುಡೇ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ ಎಂದ ಅವರು , ಮೀನುಗಾರರಿಗೆ ನನ್ನ ಮನೆ ಮತ್ತು ಮನಸ್ಸಿನ ಬಾಗಿಲು ಸದಾ ತೆರೆದಿರುತ್ತದೆ. ನಾನು ಮೊಗವೀರ ಸಮುದಾಯದ ಜೊತೆ ಸದಾ ಇದ್ದೇನೆ ಎಂದು ಸಭಾ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.
ಸಭೆಯಲ್ಲಿ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್, ಸಾರಿಗೆ ಸಚಿವ ಶ್ರೀರಾಮುಲು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಸುಕುಮಾರ್ ಶೆಟ್ಟಿ, ರಘುಪತಿ ಭಟ್,ಲಾಲಾಜಿ ಮೆಂಡನ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮೊದಲಾದವರಿದ್ದರು. ನಾಡೋಜ ಜಿ ಶಂಕರ್ ಸರ್ವರನ್ನು ಸ್ವಾಗತಿಸಿ ತಮ್ಮ ಹತ್ತುಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಮೊಗವೀರರಿಗಾಗಿ ಹಾಸ್ಟೆಲ್ ಸೌಕರ್ಯ ಮಾಡಿಸಲು ಮುಂದಾಗಬೇಕು ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…