ಕಾಪು : ದೇವಸ್ಥಾನದ ಕಾಣಿಕೆ ಡಬ್ಬದಿಂದ 15,000 ರೂಪಾಯಿ ನಗದು ಹಾಗೂ 500 ರೂಪಾಯಿ ಬೆಲೆಬಾಳುವ ಬೆಳ್ಳಿಯ 2 ತಟ್ಟೆಗಳನ್ನು ಕಳವು ಮಾಡಲಾದ ಘಟನೆ ಉಡುಪಿಯ ಕಾಪುವಿನ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ.
ಕಿಡಿಗೇಡಿಗಳು ಗುಡಿಯ ಒಳಗೆ ಪ್ರವೇಶಿಸಿ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ.
ಬಳಿಕ ದ್ವಾರದಲ್ಲಿದ್ದ ಎರಡು ಲಾಕರ್ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕೂಡಾ ಕಂಡುಬಂದಿದೆ. ದೇಗುಲದ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ.
ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ. ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ.ದೇಗುಲದ ಸಹ ಅರ್ಚಕ ರಾಜಾರಾಮ್ ಭಟ್ ಅವರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣ ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ.
ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪಡುಬಿದ್ರಿಯವರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಳ್ಳನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…