Featured

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ : ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿದರು.

ಈ ವೇಳೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಮೊಗವೀರ ಸಮಾಜದವರು ಶ್ರಮಜೀವಿಗಳಾಗಿದ್ದು, ಸಮುದಾಯದ ಮಕ್ಕಳು ಶಿಕ್ಷಣವಂತರಾಗುವತ್ತ ಗಮನ ಹರಿಸಬೇಕಾಗಿದೆ. ಕರಾವಳಿಯ ಮಣ್ಣಿಗೆ ತನ್ನದೇ ಆದ ಶಕ್ತಿಯನ್ನು ಹೊಂದಿದ್ದು ಮೊಗವೀರ ಕುಲಗುರುಗಳ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ. ಉಚ್ಚಿಲ ದಸರಾಗೆ ಸರಕಾರದಿಂದ ಪ್ರತಿವರ್ಷ ರೂ 50 ಲಕ್ಷ ಅನುದಾನವನ್ನು ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅದನ್ನು ಹೆಚ್ಚಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಕರ್ನಾಟಕ ಸರಕಾರವು ಎಲ್ಲಾ ಸಮುದಾಯಗಳ ಏಳಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಬಾಕಿ ಇರುವ ಸರಕಾರದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಪ್ರಯತ್ನ ಮಾಡಲಾಗುವುದು. ಇಲಾಖೆಯ ವತಿಯಿಂದ ಜಿಲ್ಲೆಯ 92 ಸಂಸ್ಥೆಗಳಿಗೆ ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಕರಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮುಖ್ಯಮಂತ್ರಿಗಳು ಸಚಿವ ಸಂಪುಟ ನಡೆಸಿ ಈ ಭಾಗದ ಹಲವು ವರ್ಷಗಳ ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವುದು ಐತಿಹಾಸಿಕ ಸಂಗತಿಯಾಗಿದೆ. ಕರಾವಳಿಯ ಭಾಷಿಗರು ಪ್ರೀತಿಯಿಂದ ಮಾತನಾಡಿಸುವ ಗುಣವನ್ನು ಹೊಂದಿದ್ದು ತುಳು ಭಾಷೆಗೆ ಈ ಮಾನ್ಯತೆ ದೊರತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಕೂಡ ಹಣ ಮೀಸಲಿರಿಸಲಾಗಿದ್ದು ಈ ಭಾಗದ ಅಭಿವೃದ್ಧಿಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದರು,

ಪ್ರಾಸ್ತಾವಿಕವಾಗಿ ಮಾತನಾಡಿದ ನಾಡೋಜ ಡಾ. ಜಿ. ಶಂಕರ್ ಅವರು ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತೋರಿ ಬಂದ ಹಿನ್ನೆಲೆಯಲ್ಲಿ, ಮೊಗವೀರ ಸಮಾಜ ಬಾಂಧವರ ಸಂಕಲ್ಪದಂತೆ ಸುಮಾರು ರೂ.3 ಕೋಟಿ ವೆಚ್ಚದಲ್ಲಿ, 31 ಅಡಿ ಎತ್ತರ ಹಾಗೂ ಸುಮಾರು 14 ಸಾವಿರ ಕೆ.ಜಿ. ತೂಕದ ಕಂಚನ್ನು ಬಳಸಿ ಭವ್ಯ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಸುಮಾರು 6 ಕೋಟಿ ರೂ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಿದ್ದು, ಪ್ರತಿವರ್ಷ ಅತ್ಯುತ್ತಮ ರೀತಿಯಲ್ಲಿ ದಸರಾ ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸರಕಾರದಿಂದ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಹಾಗೂ ಉಚ್ಚಿಲ ದಸರಾಕ್ಕೆ ಸರಕಾರ ಪ್ರತಿ ವರ್ಷ 2 ಕೋಟಿ ರೂ ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಗುರಿಕಾರ ಬಂಧುಗಳಿಗೆ ಧನಸಹಾಯ ವಿತರಣೆ ಮಾಡಲಾಯಿತು. ಉಚ್ಚಿಲ ದಸರಾದ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ದೇಹದಾಡ್ಯ ಸ್ಪರ್ಧೆಯ ಪೋಸ್ಟರ್ ಅನಾವರಣ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಸಮುದಾಯದ ಮುಖಂಡರಾದ ಆನಂದ್ ಸಿ ಕುಂದರ್, ಪ್ರಸಾದ್ ರಾಜ್ ಕಾಂಚನ್, ಅಜಿತ್ ಸುವರ್ಣ, ಸಂತೋಷ್ ಪುತ್ರನ್, ಉದಯ್ ಕುಮಾರ್ ಹಟ್ಟಿಯಂಗಡಿ, ವೇದಪ್ರಕಾಶ್ ಶ್ರಿಯಾನ್, ಕವಿತಾ ಶರತ್, ನಾಗರಾಜ್ ಸುವರ್ಣ ಮನೋಜ್ ಸಾಲ್ಯಾನ್ ಉಳ್ಳಾಲ ಹಾಗೂ ಇತರರು ಉಪಸ್ಥಿತರಿದ್ದರು.

ದಕ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಸ್ವಾಗತಿಸಿ ಮನೋಜ್ ಸಾಲ್ಯಾನ್ ವಂದಿಸಿದರು.

Vishwa News 24

Recent Posts

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – vishwanews24

ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ…

7 hours ago

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ…

8 hours ago

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

3 days ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

3 days ago

7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ – vishwanews24

 7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ ಬೆಂಗಳೂರು:…

3 days ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…

3 days ago