Featured

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಢಿಕ್ಕಿಯಾಗಿ ತಂದೆ, ಮಗನ ಸಾವಿಗೆ ಕಾರಣವಾದ ಲಾರಿಯನ್ನು ಚಲಾಯಿಸುತ್ತಿದ್ದದ್ದು 16 ವರ್ಷದ ಬಾಲಕ – Vishwanews24

ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಢಿಕ್ಕಿಯಾಗಿ ತಂದೆ, ಮಗನ ಸಾವಿಗೆ ಕಾರಣವಾದ ಲಾರಿಯನ್ನು ಚಲಾಯಿಸುತ್ತಿದ್ದದ್ದು 16 ವರ್ಷದ ಬಾಲಕ

ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್‌ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದು, ಈ ಗೂಡ್ಸ್‌ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಅಪಘಾತಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಜಿಲ್ಲೆ ಹುಕ್ಕೇರಿ ಮೂಲದ ಬಾಲಕ ಸಮರ್ಥ್ ಪೋದ್ದಾರ್‌ (13) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದೇ ಘಟನೆಯಲ್ಲಿ ಲಾರಿಯ ಚಕ್ರ ಮೈಮೇಲೆ ಹರಿದು ಹೋಗಿದ್ದರಿಂದ ಸ್ಥಳದಲ್ಲೇ ಸಮರ್ಥ್ ತಂದೆ ಪ್ರಭಾಕರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇನ್ನು ಸೂರ್ಯ ಚೈತನ್ಯ ಶಾಲೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಸಮರ್ಥ, ರಜೆಯಲ್ಲಿ ಗಣೇಶ ಚೌತಿ ಹಬ್ಬಕ್ಕೆ ಊರಿಗೆ ತೆರಳಿದ್ದು, ತಂದೆಯೊಂದಿಗೆ ಬೆಳಗಾವಿಯಿಂದ ಬಸ್ಸಿನಲ್ಲಿ ಬಂದು ಉಚ್ಚಿಲದಲ್ಲಿ ಇಳಿದಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿಯಾಗಿತ್ತು.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪರಾರಿಯಾಗಿದ್ದ ಗೂಡ್ಸ್‌ ಲಾರಿಯನ್ನು ಪೊಲೀಸರು ಸಿಸಿ ಟಿವಿ ಫೂಟೇಜ್‌ಗಳನ್ನು ಆಧರಿಸಿ ಬೆಂಬತ್ತಿ ಹೋಗಿ ಲಾರಿಯ ಚಾಲಕ, ಆರೋಪಿ ಶೇಖರ್‌ನನ್ನು ವಶಕ್ಕೆ ಪಡೆದಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಲಾರಿಯನ್ನು 16 ವರ್ಷದ ಬಾಲಕ ರಾತ್ರಿಯಿಡೀ ಚಲಾಯಿಸಿಕೊಂಡು ಬಂದಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಇನ್ನು ಆ ಬಾಲಕ ಲಾರಿಯ ಕ್ಲೀನರ್‌ ಬಾಯ್‌ ಆಗಿದ್ದು, ಬಾಲಕನು ಯಾವುದೇ ಲಾರಿಯಾದರೂ ರಾತ್ರಿ ವೇಳೆ ಮುಂಬಯಿ ಎಕ್ಸ್‌ಪ್ರಸ್‌ ವೇನಂತಹ ಹೆದ್ದಾರಿಯಲ್ಲೂ ಸಹಿತ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.

ಪ್ಲಾಸ್ಟಿಕ್‌ ಉತ್ಪಾದನೆಯ ಕಚ್ಚಾ ವಸ್ತುವನ್ನು ಗುಜರಾತ್‌ನಿಂದ ಹೊತ್ತು ಬರುತ್ತಿದ್ದ ಈ ಲಾರಿಯನ್ನು ಪೊಲೀಸರು ಗಂಜಿಮಠ ಪರಿಸರದಿಂದ ವಶಕ್ಕೆ ಪಡೆದುಕೊಂಡಿದ್ದು, ಚಾಲಕ ಶೇಖರ್‌ನನ್ನು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಾಲಕನನ್ನು ಖಾಸಗಿ ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago