ಉಚ್ಚಿಲ : ದಲಿತ ಸಮುದಾಯಕ್ಕೆ ಮೃತ ದೇಹದ ಅಂತಿಮ ಸಂಸ್ಕಾರ ಮಾಡಲು ಸರಿಯಾದ ಭೂಮಿಯ ವ್ಯವಸ್ಥೆ ಇಲ್ಲದ ಹಿನ್ನಲೆಯಲ್ಲಿ ದಲಿತ ನಾಯಕನ ಶವದ ಸಂಸ್ಕಾರವನ್ನು ಗ್ರಾಮ ಪಂಚಾಯತ್ ಮುಂದೆ ಮಾಡಲು ಪ್ರಯತ್ನಿಸಿದ ಘಟನೆ ಪಡುಬಿದ್ರೆಯೆ ಉಚ್ಚಿಲ ಬಡ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಶಂಕರ್ ಎಂಬವರು ಮುಲ್ಲಗುಡ್ಡೆ ನಿವಾಸಿ ಮಂಗಳವಾರ ನಿಧನವಾಗಿದ್ದಾರೆ. ಆದರೆ ಅವರ ಮೃತ ದೇಹದ ಅಂತ್ಯಕ್ರಿಯೆ ಮಾಡಲು ಸ್ಥಳವಿಲ್ಲದ ಹಿನ್ನಲೆಯಲ್ಲಿ ಶವವನ್ನು ಉಚ್ಚಿಲ ಪಂಚಾಯತ್ ಕಚೇರಿಯ ಮುಂದೆ ಇಟ್ಟುಕೊಂಡು ಅಲ್ಲೇ ಅವರ ದೇಹದ ಅಂತ್ಯಕ್ರಿಯೆ ಮಾಡಲು ಮಂದಾಗುವ ಮೂಲಕ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ಇದೆ.
ಈ ಪ್ರದೇಶದಲ್ಲಿ ಸಾರ್ವಜನಿಕ ಹಿಂದೂ ಸ್ಮಶಾನವಿದೆ. ಆದರೆ ದಲಿತ ಸಮುದಾಯಕ್ಕೆ ಸೇರಿದ ಜನರ ಮೃತ ದೇಹಗಳ ಅಂತ್ಯ ಸಂಸ್ಕಾರ ಮಾಡಲು ಅಲ್ಲಿ ನಿಬಂಧ ಹೇರಲಾಗಿದೆ. ಆ ಸ್ಮಶಾನದಲ್ಲಿ ಮೇಲ್ಜಾತಿಯವರಾದ ಮೊಗವೀರ ಸಮಾಜದವರಿಗೆ ಮಾತ್ರ ಅಂತ್ಯಕ್ರಿಯೆ ಮಾಡಲು ಅವಕಾಶವಿದೆ.
ಈ ಸಾರ್ವಜನಿಕ ಹಿಂದೂ ಸ್ಮಶಾನವು ಸರ್ಕಾರಕ್ಕೆ ಸೇರಿದ್ದರೂ ದಲಿತರಿಗೆ ಆ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶವಿಲ್ಲ. ಈ ವಿಷಯದಲ್ಲಿ ದಲಿತ ಸಂಘರ್ಷ ಸಮಿತಿ ತೀವ್ರ ಹೋರಾಟ ನಡೆಸಿದೆ. ಪಂಚಾಯತ್ ಆಡಳಿತ ಜಿಲ್ಲಾಡಳಿತದಿಂದ ಲಕ್ಷ ರೂಪಾಯಿಗಳ ಅನುದಾನವನ್ನು ಪಡೆದಿದ್ದರೂ ದಲಿತರಿಗೆ ಶವ ಸಂಸ್ಕಾರ ಮಾಡಲು ಸ್ಮಶಾನ ನಿರ್ಮಿಸುತ್ತಿಲ್ಲ.
ಸ್ಥಳಕ್ಕೆ ಪಂಚಾಯತ್ ಆಡಳಿತಾಧಿಕಾರಿಗಳು ಮತ್ತು ಪೊಲೀಸರು ಧಾವಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…