ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವ ಸುನಿಲ್ ಕುಮಾರ್ ಕುಟುಂಬ ಸಹಿತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಅನುದಾನವನ್ನು ಸಚಿವ ಸುನಿಲ್ ಕುಮಾರ್ ದೇವಳದಲ್ಲಿ ಘೋಷಣೆ ಮಾಡಿದರು.
ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್‍ಗೆ ಈ ಬಾರಿ ಎಂಎಲ್‍ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24
ಸಂಘದ ಮನವಿಗೆ ಸ್ಪಂದಿಸಿ 25 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ತ ಮೊಗವೀರ ಸಮಾಜದ ಪರವಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಕೃತಜ್ಞತೆಗಳನ್ನು ಸಲ್ಲಿಸಿದರು.
ದೇವಳದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.
ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್, ಜತೆ ಕಾರ್ಯದರ್ಶಿ ಮೋಹನ್ ಬಿ. ಕರ್ಕೇರ, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್. ಸಾಲ್ಯಾನ್ ಉಪಸ್ಥಿತರಿದ್ದರು.
ಶರನ್ನವರಾತ್ರಿ ಮಹೋತ್ಸವದ 7ನೇ ದಿನವಾದ ಭಾನುವಾರ ಸನ್ನಿಧಿಯಲ್ಲಿ ಶ್ರೀ ಶಾರದಾ ಮಾತೆಯ ಪೂಜಾರಂಭಗೊಂಡಿತು. ಉದಯ ಪೂಜೆಯ ಬಳಿಕ ಚಂಡಿಕಾ ಹೋಮ, ನವದುರ್ಗೆಯರಿಗೆ ಏಕಕಾಲದಲ್ಲಿ ಮಹಾ ಮಂಗಳಾರತಿ, ಮಹಾಪೂಜೆ, ಅನ್ನ ಸಂತರ್ಪಣೆ, ಭಜನಾ ಕಾರ್ಯಕ್ರಮ, ಚಂಡಿಕಾ ಕಲ್ಪೋಕ್ತ ಪೂಜೆ, ಸಾವಿರ ಸುಮಂಗಲಿಯರಿಂದ ಸಾಮೂಹಿಕ ಕುಂಕುಮಾರ್ಚನೆ, ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು. ಭಾನುವಾರದ ವಿಶೇಷ ದಿನದಂದು ಸನ್ನಿಧಿಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದರು.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…