Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ- ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024 – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶರನ್ನವರಾತ್ರಿ ಸಂಭ್ರಮ– ಇಂದಿನಿಂದ ವೈಭವದ ಉಡುಪಿ ಉಚ್ಚಿಲ ದಸರಾ-2024

ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ, ಕರ್ನಾಟಕದ ಕೊಲ್ಲಾಪುರ ಖ್ಯಾತಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅ. 3ರಿಂದ 12ರ ವರೆಗೆ ಜರಗಲಿರುವ ಉಡುಪಿ ಉಚ್ಚಿಲ ದಸರಾ 2024

ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ
ಅ. 3ರಿಂದ 12ರ ವರೆಗೆ ಪ್ರತಿದಿನ ಬೆಳಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಭಜನೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಶ್ರೀ ದುರ್ಗಾ ಕಲ್ಲೋಕ್ತ ಪೂಜೆ, ಪ್ರಸಾದ ವಿತರಣೆ, ಆಕರ್ಷಕ ಲೇಸ‌ ಶೋ ಮತ್ತು ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆಯಲಿವೆ.

ಅ.12ರಂದು ಶೋಭಾಯಾತ್ರೆ
ಅ. 12ರಂದು ಸಂಜೆ ಉಚ್ಚಿಲ – ಎರ್ಮಾಳು – ಉಚ್ಚಿಲ – ಮೂಳೂರು – ಕಾಪುವಿ ವರೆಗೆ ವೈಭವದ ಶೋಭಾಯಾತ್ರೆ ನಡೆದು ಕಾಪು ಲೈಟ್ ಹೌಸ್‌ ಬಳಿಯ ಕಡಲ ಕಿನಾರೆಯಲ್ಲಿ ಸುಮಂಗಲೆಯರಿಂದ ಮಹಾಮಂಗಳಾರತಿ, ಬೃಹತ್ ಗಂಗಾರತಿ, ಲೇಸರ್ ಶೋ, ಮ್ಯೂಸಿಕಲ್ ನೈಟ್ ಸಹಿತವಾಗಿ ರಾತ್ರಿ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ನಡೆಯಲಿದೆ.

ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದೊಂದಿಗೆ ನಡೆಯುವ 3ನೇ ವರ್ಷದ ಉಚ್ಚಿಲ ದಸರಾ ಪ್ರಯುಕ್ತ

ಅ.3ರಂದು ಸಂಜೆ ನೃತ್ಯ ಸ್ಪರ್ಧೆ,

ಅ. 5ರಂದು ಬೆಳಗ್ಗೆ ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಮಧ್ಯಾಹ್ನ ಚಿತ್ರಕಲಾ ಸ್ಪರ್ಧೆ, ಸಂಜೆ ಸಾಮೂಹಿಕ ಕುಣಿತ ಭಜನೆ, ಶ್ರೀ ರಾಮ ಹನುಮಂತ ನೃತ್ಯ ರೂಪಕ,

ಅ. 6ರಂದುಬೆಳಗ್ಗೆ ಕುಸ್ತಿ ಸ್ಪರ್ಧೆ, ಮಧ್ಯಾಹ್ನಹೆಣ್ಮಕ್ಕಳ ಹುಲಿಕುಣಿತಸ್ಪರ್ಧೆ, ಸಂಜೆ ಸಾಮೂಹಿಕ ದಾಂಡಿಯಾ ನೃತ್ಯ, ವಿಸ್ಮಯ ಜಾದೂ,

ಅ. 7ರಂದು ಮಧ್ಯಾಹ್ನ ಮಹಿಳೆಯರಿಗೆ ಮತ್ತು ಪುರುಷರಿಗೆ ರಂಗೋಲಿ ಸ್ಪರ್ಧೆ, ಶತವೀಣಾವಲ್ಲರಿ,

ಅ. 10ರಂದು ದೇಹದಾರ್ಡ್ಯ ಸ್ಪರ್ಧೆ,

ಅ. 11ರಂದು ಅಜಯ್ ವಾರಿಯರ್ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

12 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

12 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

13 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

15 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

16 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

16 hours ago