ಉಚ್ಚಿಲ : ಹಸಿದವರ ಹೊಟ್ಟೆ ತಣಿಸುವ ಹಾಗೂ ಬಡವರ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸುವ ಉಪಕಾರ ಮನೋಭಾವನೆ ದೇವರಿಗೆ ಪ್ರೀಯವಾಗುತ್ತದೆ ಈ ನಿಟ್ಟಿನಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರವೂ ಬಡವರ ಕಷ್ಟಕ್ಕೆ ಸ್ಪಂದಿಸುವ ದೇವಾಲಯವಾಗಲಿ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.
ಅವರು ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಚತುಃ ಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ದೇವಳದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ದೇವರು ಮುಗ್ದತೆಯುಳ್ಳವರಿಗೆ ಒಲಿದು ಅನುಗ್ರಹ ಪ್ರಾಪ್ತಿ ಆಗುತ್ತದೆ. ನಾವು ಇನ್ನೊಬ್ಬರನ್ನು ಸಂತೋಷಪಡಿಸುವುದು ಖುಷಿ ನೆಮ್ಮದಿಯಿಂದ ಬದುಕುವುದಕ್ಕೆ ಅವಕಾಶ ನೀಡುವುದೇ ದೇವರ ಪೂಜೆ. ಲಕ್ಷ್ಮೀ ಒಲಿಯಬೇಕಾದರೆ ನಾರಾಯಣನಂತಹ ಗುಣ ಇರಬೇಕು. ಶಾಂತತೆ, ಮುಗ್ದದೆ ಇರಬೇಕು ಎಂದರು.
ಸಮಾಜದ ಎಲ್ಲಾ ಸಮುದಾಯವೂ ಧಾರ್ಮಿಕತೆಯ ಜೊತೆಗೆ ಸಾಮಾಜಿಕವಾಗಿ ಮೇಲೆ ಬರಬೇಕು ದೇವಸ್ಥಾನ ಧಾರ್ಮಿಕ ಭಾವನೆ ಜಾಗೃತಿಗೊಳಿಸುವ ಜೊತೆಗೆ ಯುವ ಸಮುದಾದಯದ ಆತ್ಮಶಕ್ತಿ ಜಾಗೃತಗೊಳಿಸುವ ಕೇಂದ್ರವಾಗಲಿ ಎಂದರು.
ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಡಾ. ಜಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ದೇವಾನಂದ ಗುರಿಕಾರರು, ಬೋಳೂರು ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಕಲ್ಯ ರಮೇಶ ಹೆಗ್ಡೆ, ಎರ್ಮಾಳ್ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು ಬೀಡು ಪಡುಬಿದ್ರಿ ವನದುರ್ಗಾ ಟ್ರಸ್ಟ್ ಕಾರ್ಯದರ್ಶಿ ವೈ ಎನ್ ರಾಮಚಂದ್ರ ರಾವ್, ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರತ್ನಾಕರ ರಾಜ್ ಕನ್ಯಕ್ಕ ಬಲ್ಲಾಳ್, ಮಣಿಪಾಲ ಶ್ರೀ ಬಬ್ಬು ಸ್ವಾಮಿ ಕ್ಷೇತ್ರದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ ಎನ್ ಶಂಕರ ಪೂಜಾರಿ, ಹಾಗೂ ಇತರರು ಉಪಸ್ಥಿತರಿದ್ದರು.
ಉಚ್ಚಿಲ ದೇವಳದ ಜೀರ್ಣೋಧ್ದಾರ ಸಮಿತಿ ಕಾರ್ಯದರ್ಶಿ ಶಂಕರ್ ಸಾಲ್ಯಾನ್ ವಂದಿಸಿದರು ವಿಜೇತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…