Featured

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ – Vishwanews24

ಉಚ್ಚಿಲ: ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಲು ಸರಕಾರ ಬದ್ಧ: ಸಚಿವ ವೈದ್ಯ

ಉಚ್ಚಿಲ: ಮೊಗವೀರ ಮಹಾಜನ ಸಂಘದ ವತಿಯಿಂದ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರುಗಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮಂಕಾಳ ಎಸ್ ವೈದ್ಯ, ಜಿ ಶಂಕರ್ ಅವರ ದಾನ ಧರ್ಮದಿಂದ ಸಮಾಜದ ಆಶೀರ್ವಾದ ಅವರ ಮೇಲಿದೆ. ಹೆಜಮಾಡಿ ಬಂದರು ಕಾಮಗಾರಿಗೆ ಬಾಕಿ ಅನುದಾನ ಬಿಡುಗಡೆ ಮಾಡಿ ಸಂಪೂರ್ಣ ಮಾಡಲು ಸರಕಾರ ಬದ್ಧವಾಗಿದೆ. ಪಕ್ಷ ಬೇಧ ಮರೆತು ಕರಾವಳಿಯ ಅಭಿವೃದ್ಧಿಗೆ ಶ್ರಮವಹಿಸೋಣ ಎಂದರು.

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮೀನುಗಾರರಿಗೆ ಸರಿಯಾದ ಸವಲತ್ತು ಸರಕಾರದಿಂದ ಲಭಿಸಲು ಸಚಿವರು ಶ್ರಮಿಸಬೇಕು.

ಮೀನುಗಾರಿಕಾ ಸಮುದಾಯದವರಾದ ಸಚಿವರಿಗೆ ಮೀನುಗಾರರ ಸಮಸ್ಯೆಗಳ ಬಗ್ಗೆ ತಿಳಿಸಿ ಹೇಳಬೇಕಾಗಿಲ್ಲ. ಅತಿ ಹೆಚ್ಚು ಮೀನುಗಾರರಿರುವ ಜಿಲ್ಲೆ ಉಡುಪಿ. ಮೀನುಗಾರರ ಶ್ರೇಯೋಭಿವೃದ್ಧಿಗೆ ಸರಕಾರ ಸಹಕರಿಸಬೇಕು. ಕರಾವಳಿಯ ೩ ಜಿಲ್ಲೆಯ ಮೀನುಗಾರರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಮಾಹಿತಿ ಸಿಗುವಂತಾಗಬೇಕು. ಡ್ರೆಜ್ಜಿಂಗ್, ಸೀ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಡಾ‌‌ ಜಿ. ಶಂಕರ್ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಆನಂದ ಸಿ. ಕುಂದರ್, ಪ್ರಸಾದ್ ರಾಜ್ ಕಾಂಚನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago