Featured

ಉಚ್ಚಿಲ: 3ನೇ ವರ್ಷದ ದಸರಾ ಮಹೋತ್ಸವ –  ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ – vishwanews24

ಉಚ್ಚಿಲ: 3ನೇ ವರ್ಷದ ದಸರಾ ಮಹೋತ್ಸವ –  ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ದಸರಾ ಮಹೋತ್ಸವಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿಯವರು ಶ್ರೀಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಚಾಲನೆ ನೀಡಿದರು.

ಸಭಾಂಗಣದಲ್ಲಿಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಗಿದೆ.

ಪುರೋಹಿತರಾದ ಕೆ.ವಿ ರಾಘವೇಂದ್ರ ಉಪಾಧ್ಯಾಯರು ಪ್ರತಿಷ್ಠಾಪನಾ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.

ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್‌ ಅವರು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಕಾಪು ತಹಶಿಲ್ದಾರ್‌, ಡಾ.ಪ್ರತಿಭಾ ಆರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಉಧ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ಈ ಬಾರಿಯ ಉಡುಪಿ – ಉಚ್ಚಿಲ ನಾಡಹಬ್ಬ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ತಾಯಿ ಶಾರದೆ ಎಲ್ಲಾ ಜನರಿಗೆ ಮಂಗಳ ಉಂಟು ಮಾಡಲಿ ಎಂದು ಹಾರೈಸಿದರು.

ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು.

ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭ ನೆರವೇರಿತು.

ಈ ಸಂದರ್ಭ ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ,ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್., ಸದಸ್ಯರಾದ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳು, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಉಚ್ಚಿಲ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ಮಂಜುನಾಥ್ ಸುವರ್ಣ ಬ್ರಹ್ಮಾವರ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಿವರಾಮ ಕೋಟ, ಲೋಕೇಶ್ ಮೆಂಡನ್ ಉಪ್ಪೂರು, ವಿನಯ ಕರ್ಕೆರ ಮಲ್ಪೆ, ಕೇಶವ ಎಂ ಕೋಟ್ಯಾನ್ ಮಲ್ಪೆ, ಗಿರೀಶ್ ಕುಮಾರ್ ಪಿತ್ರೋಡಿ, ಜಯಂತ್ ಸಾಲ್ಯಾನ್ ಕನಕೋಡ, ಕಿರಣ್ ಕುಮಾರ್ ಪಿತ್ರೋಡಿ, ಸುಧಾಕರ ವಿ ಸುವರ್ಣ ಉಚ್ಚಿಲ, ನಾರಾಯಣ ಸಿ ಕರ್ಕೇರ ಪಡಬಿದ್ರಿ ಕಾಡಿಪಟ್ಣ, ಸತೀಶ್ ಆರ್ ಕರ್ಕೇರ ಸುರತ್ಕಲ್, ವಿಜಯ ಸುವರ್ಣ ಕುಳಾಯಿ, ಹೇಮಂತ್ ತಿಂಗಳಾಯ ಹೊಯ್ಗೆ ಬಜಾರ್, ಪುರುಷೋತ್ತಮ ಕೋಟ್ಯಾನ್ ಬೋಳೂರು, ಯಶವಂತ್ ಪಿ ಮೆಂಡನ್ ಬೋಳೂರು, ಶಿಲ್ಪ ಜಿ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ದೇವಳದ ಪ್ರಬಂಧಕ ಸತೀಷ್‌ ಅಮೀನ್‌ ಪಡುಕೆರೆ ನಿರೂಪಿಸಿದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

2 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

8 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

9 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

11 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

11 hours ago