ತುಮಕೂರು: ಜೆಡಿಎಸ್ನಿಂದ ನನ್ನನ್ನು ಉಚ್ಛಾಟಿಸಿದ್ದರಲ್ಲಿ ಹೊಸದೇನಿಲ್ಲ. ಉಚ್ಛಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಉಚ್ಛಾಟಿತ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು
.ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಶ್ರೀನಿವಾಸ್, ಈ ಬೆಳವಣಿಗೆ ಮುಜುಗರ ಅಥವಾ ಅವಮಾನ ಎಂದು ನನಗೆ ಅನಿಸೋದಿಲ್ಲ. ಅವರು ನನ್ನ ವಿರುದ್ಧ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿರುಗೇಟು ಕೊಟ್ಡರು. ವಿಪ್ ಉಲ್ಲಂಘನೆಯಾಗಿದ್ರೆ ಸದನದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಜೆಡಿಎಸ್ ವರಿಷ್ಠರಿಗೆ ಗುಬ್ಬಿ ಶಾಸಕ ಸವಾಲು ಹಾಕಿದರು.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬುಧವಾರ ಉಚ್ಛಾಟನೆ ಮಾಡಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…