ಬೆಳ್ತಂಗಡಿ: ಉಜಿರೆಯಲ್ಲಿ ಮನೆಮುಂದೆ ಆಟವಾಡುತ್ತಿದ್ದ ಮಗುವಿನ ಅಪಹರಣ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿ, ನಾಲ್ವರನ್ನು ಬಂಧಿಸಿದ್ದಾರೆ.
ಮಗುವನ್ನು ಕೋಲಾರದಲ್ಲಿ ಪತ್ತೆ ಹಚ್ಚಿ ನಾಲ್ವರು ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದಅನುಭವ್ (8) ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದು, ಈ ಪ್ರಕರಣ ಸಾಕಷ್ಟು ಆತಂಕ ಸೃಷ್ಟಿಸಿತ್ತು.
ಇನ್ನು ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5 ಗಂಟೆಗೆ ಪತ್ತೆ ಹಚ್ಚಿ, ತಕ್ಷಣ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು.
ಇಂದು ಅಪರಾಹ್ನ ಕೋಲಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆತರಲಾಗುತ್ತದೆ ಎನ್ನಲಾಗಿದ್ದು, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…