Featured

ಉಜಿರೆ ಮಗು ಅಪಹರಣ ಪ್ರಕರಣ : 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು -Vishwanews24

ಉಜಿರೆ ಮಗು ಅಪಹರಣ ಪ್ರಕರಣ : 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು -Vishwanews24

ಬೆಳ್ತಂಗಡಿ: ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದಾರೆ.

ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ಮನೆ ಎದುರುಗಡೆ ಆಟವಾಡುತ್ತಿದ್ದ ‌ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ.

ಇನ್ನು ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ತಿಳಿದು ಬಂದಿದೆ.

ಕುಟುಂಬದ ವ್ಯವಹಾರಗಳ ತಿಳುವಳಿಕೆ ಇರುವ ವ್ಯಕ್ತಿಗಳೇ ಕೃತ್ಯ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಮೊಬೈಲ್ ನೆಟ್ ವರ್ಕ್ ಮೂಲಕ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago