ಬೆಳ್ತಂಗಡಿ: ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದಾರೆ.
ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ಮನೆ ಎದುರುಗಡೆ ಆಟವಾಡುತ್ತಿದ್ದ ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ.
ಇನ್ನು ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ತಿಳಿದು ಬಂದಿದೆ.
ಕುಟುಂಬದ ವ್ಯವಹಾರಗಳ ತಿಳುವಳಿಕೆ ಇರುವ ವ್ಯಕ್ತಿಗಳೇ ಕೃತ್ಯ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಮೊಬೈಲ್ ನೆಟ್ ವರ್ಕ್ ಮೂಲಕ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…