Featured

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಂಕಿ ಅವಘಡ : 13 ಮಂದಿಗೆ ಗಾಯ – Vishwanews24

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಂಕಿ ಅವಘಡ ; 13 ಮಂದಿಗೆ ಗಾಯ

ಮಧ್ಯಪ್ರದೇಶ : ಭಸ್ಮ ಆರತಿ ವೇಳೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 13 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಹೋಳಿ ಆರತಿ ವೇಳೆ ಗುಲಾಲ್ ಊದಿದಾಗ ಬೆಂಕಿ ವ್ಯಾಪಿಸಿ ಈ ದುರಂತ ನಡೆದಿದೆ ಎಂದು ತಿಳಿದುಬಂದಿದೆ. ಹಲವಾರು ಅರ್ಚಕರು ಮತ್ತು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಉಜ್ಜಯಿನಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯಲ್ಲಿ ಮುಖ್ಯ ಅರ್ಚಕ ಸಂಜಯ್ ಗುರು, ವಿಕಾಸ್ ಪೂಜಾರಿ, ಮನೋಜ್ ಪೂಜಾರಿ, ಅಂಶ್ ಪುರೋಹಿತ್, ಸೇವಕ ಮಹೇಶ್ ಶರ್ಮಾ, ಚಿಂತಾಮನ್ ಗೆಹ್ಲೋಟ್ ಮತ್ತಿತರರು ಗಾಯಗೊಂಡಿದ್ದಾರೆ. ಒಂಬತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅವರನ್ನು ಇಂದೋರ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಹೋಳಿ ಆಚರಣೆಯ ಅಂಗವಾಗಿ ಗರ್ಭಗುಡಿಯೊಳಗೆ ‘ಗುಲಾಲ್’ (ಆಚರಣೆಗಳು ಮತ್ತು ಹೋಳಿ ಸಮಯದಲ್ಲಿ ಬಳಸುವ ಬಣ್ಣದ ಪುಡಿ)ಎಸೆಯಲಾಗುತ್ತಿತ್ತು. ಯಾರೋ ಬಣ್ಣದ ಗುಲಾಲನ್ನು ಮಣ್ಣಿನ ದೀಪದ ಮೇಲೆ ಎಸೆದರು. ಈ ವೇಳೆ ಗುಲಾಲ್‌ನೊಳಗಿನ ರಾಸಾಯನಿಕಗಳು ಬೆಂಕಿಗೆ ತಗುಲಿ ಒಮ್ಮಿಂದೊಮ್ಮೆಲೆ ಬೆಂಕಿ ಹೆಚ್ಚಾಗಿ ಈ ಘಟನೆ ನಡೆದಿರಬಹುದು ಎಂದು ಊಹಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago