Featured

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧಿಸಲಾಗಿದೆ.

ಘಟನೆ ವಿವರ

ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿ ಚಾರಕಿ ಸವಿತಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನಾಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ಸವಿತಾ ಅವರೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ. ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು. ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.

ಆರೋಪಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳು ಇರದ ಹಿನ್ನೆಲೆ ನಗರದ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭ ನರ್ಸಿಂಗ್ ಹೋಮ್‌ನಲ್ಲಿ ಮಗುವೊಂದು ಇರುವ ವಿಚಾರ ಲಕ್ಷ್ಮೀ ಅವರಿಗೆ ತಿಳಿದು ಬಂದಿತ್ತು. ಪ್ರಕಾಶ್ ಮತ್ತು ಪೂರ್ಣಿಮಾ ಅಲ್ಲಿನ ವೈದ್ಯರನ್ನು ಭೇಟಿಯಾಗಿ ಮಗುವನ್ನು ನೀಡುವಂತೆ ಕೇಳಿಕೊಂಡಿದ್ದರು. ವೈದ್ಯರು ದಂಪತಿಗೆ ಒಂದು ತಿಂಗಳ ಹಿಂದೆ ಜನಿಸಿದ್ದ ಯಾರದ್ದೋ ಹೆಣ್ಣು ಮಗುವನ್ನು ಕೊಟ್ಟಿದ್ದರು.

ಮಗುವಿನ ಜೈವಿಕ ಪೋಷಕರು ಯಾರು ಎಂದು ತಿಳಿದಿಲ್ಲ. ಮಗುವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಆರೋಪಿ ದಂಪತಿ ಅಧಿಕಾರಿಗಳ ಮುಂದೆ ತಪ್ರೊಪ್ಪಿಕೊಂಡಿದ್ದರು. ಈ ಬಗ್ಗೆ ಜೂ. 20ರಂದು ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

23 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago