Featured

ಉಡುಪಿ:ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಸಕಾಲ ಪ್ರಗತಿ ಪರಿಶೀಲನಾ ಸಭೆ ಮತ್ತು ಆನ್‍ಲೈನ್‍ನಲ್ಲಿ ಸಕಾಲ ಸ್ವಯಂಚಾಲಿತ ಕಾರಣ ಕೇಳುವ ಪ್ರಕ್ರಿಯೆಯ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ, ಉಡುಪಿ ಜಿಲ್ಲೆಯು ಜುಲೈನಿಂದ ಅಗಸ್ಟ್ ತಿಂಗಳವರೆಗಿನ ಒಂದನೇ ಸ್ಥಾನ ಮತ್ತು ಅರ್ಜಿ ಸ್ವೀಕರಿಸುವುದರಲ್ಲಿ ಹತ್ತನೇ ಸ್ಥಾನದಲ್ಲಿದ್ದು, ಒಟ್ಟು ಸಾಧನೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯು ಒಂದನೇ ಸ್ಥಾನಕ್ಕೇರುವಂತಾಗಲು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು.

ಜಿ.ಪಂ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯತ್‍ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ, ಸಕಾಲದಲ್ಲಿ ಗುರುತಿಸಲ್ಪಟ್ಟ ಸೇವೆಗಳನ್ನು, ಸಕಾಲ ಹೊರತುಪಡಿಸಿ ನೇರವಾಗಿ ನೀಡುವುದು ಕಂಡು ಬರುತ್ತಿದ್ದು, ಅಂತಹ ಅರ್ಜಿ ಸ್ವೀಕರಿಸಿ, ವಿಲೇವಾರಿ ಮಾಡುವ ಸಿಬ್ಬಂದಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವುದಕ್ಕೆ ಕಾರಣ ಕೇಳುವ ನೋಟಿಸ್ ಅನ್ನು ಮುಂದಿನ ದಿನಗಳಲ್ಲಿ ಆನ್‍ಲೈನ್ ಮೂಲಕವೇ ಸಂಬಂದಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ನೋಟೀಸ್ ನೀಡಿದ 7 ದಿನಗಳಲ್ಲಿ ಸಮಂಜಸ ಕಾರಣ ನೀಡಬೇಕು ಇಲ್ಲವಾದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಆನ್‍ಲೈನ್ ಮೂಲಕವೇ ಅರ್ಜಿ ಸಲ್ಲಿಕೆಯಾಗಲಿದ್ದು, ತಪ್ಪಿತಸ್ಥರೆಂದು ಕಂಡುಬಂದಲ್ಲಿ, ದಂಡದ ಮೊತ್ತವನ್ನು ಪ್ರಕರಣ ಇತ್ಯರ್ಥವಾಗುವ ತನಕವೂ, ನೇರವಾಗಿ ಸಂಬಂಧಪಟ್ಟ ಅಧಿಕಾರಿ/ನೌಕರರ ವೇತನದಲ್ಲಿ ಕಡಿತಗೊಳ್ಳುವ ತಂತ್ರಾಂಶ ಸಹ ಸಿದ್ದವಾಗಿದೆ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago