Featured

ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ – Vishwanews24

ಉಡುಪಿ:ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿ ದಂಪತಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ : ತಾಲೂಕಿನ ಪುತ್ತೂರು ಸುಬ್ರಹ್ಮಣ್ಯ ನಗರದಲ್ಲಿ ನಾಲ್ಕು ವರ್ಷದ ಹಿಂದೆ 80 ವರ್ಷದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಕೊಲೆ ಮಾಡಿದ ದಂಪತಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಧಾರವಾಡ ತಾಲೂಕಿನ ನವಲಗುಂದ ನಿವಾಸಿಗಳಾದ ಅಂಬಣ್ಣ ಅಲಿಯಾಸ್ ಅಂಬರೀಶ್ ಹಾಗೂ ಆತನ ಪತ್ನಿ ರಶೀದಾ ಅಲಿಯಾಶ್ ಜ್ಯೋತಿ ಶಿಕ್ಷೆಗೆ ಗುರಿಯಾದ ದಂಪತಿಯಾಗಿದ್ದು, ರತ್ನಾವತಿ ಶೇಡ್ತಿ (80) ಕೊಲೆಯಾದವರು. ದಂಪತಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ತಲಾ 50,0000 ರೂ.ದಂಡ ಸಹ ವಿಧಿಸಲಾಗಿದೆ.

ಪ್ರಕರಣದ ಹಿನ್ನಲೆ: ರತ್ನಾವತಿ ಶೇಡ್ತಿ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದು, ಪುತ್ತೂರಿನ ಸುಬ್ರಹ್ಮಣ್ಯ ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮೂರು ಕೊಠಡಿಗಳನ್ನು ಬಾಡಿಗೆ ಕೊಟ್ಟು ಜೀವನ ನಿರ್ವಹಣೆ ಮಾಡುತ್ತಿದ್ದರು. ಮಕ್ಕಳು ಆಗಾಗ ಬಂದು ತಾಯಿಯ ಯೋಗಕ್ಷೇಮ ವಿಚಾರಿಸಿ ಕೊಳ್ಳುತ್ತಿದ್ದರು.

2019ರ ಜು.5ರಂದು ಪುತ್ರಿ ಸುಪ್ರಭಾ ತಾಯಿಗೆ ಕಾಲ್ ಮಾಡಿದಾಗ ಅವರು ಸ್ವೀಕರಿಸಲಿಲ್ಲ. ಕೂಡಲೇ ಸಹೋರರಿಗೆ ಕರೆ ಮಾಡಿ ವಿಚಾರಿಸಿದಾಗಲೂ ತಾಯಿಯ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಅದೇ ದಿನ ಸಂಜೆ ಅಮ್ಮನ ಮನೆಗೆ ಬಂದಾಗ ಬೆಡ್‌ರೂಮಿನಲ್ಲಿ ತಾಯಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತತ್‌ಕ್ಷಣ ಆಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳು ಬಿಟ್ಟಿದ್ದ ಸುಳಿವಿನ ಜಾಡು ಹಿಡಿದ ಪೊಲೀಸರು ಜು.10ರಂದು ಆರೋಪಿ ದಂಪತಿಯನ್ನು ಬಂಧಿಸಿದ್ದರು. ಆರೋಪಿಗಳನ್ನು ವಿಚಾರಣೆಗೊಳ ಪಡಿಸಿದಾಗ ಜು.2ರಂದು ಅಪರಾಹ್ನ ರತ್ನಾವತಿ ಶೇಡ್ತಿ ಮನೆಗೆ ನುಗ್ಗಿ ಆಭರಣಕ್ಕೆ ಬೇಡಿಕೆ ಇಡಲಾಗಿತ್ತು. ಕೊಡಲು ನಿರಾಕರಿಸಿದಾಗ ಕತ್ತಿಯಿಂದ ಕೊಲೆ ಮಾಡಿ ಮೈಮೇಲಿದ್ದ ಆಭರಣ, ಮನೆಯಲ್ಲಿದ್ದ ಚಿನ್ನಾಭರಣ, ಮೊಬೈಲ್ ಹಾಗೂ 5,000ರೂ. ನಗದನ್ನು ದೋಚಿ ಪರಾರಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು.

ಅಂದಿನ ಉಡುಪಿ ಇನ್‌ಸ್ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಾಯಾಲಯದಲ್ಲಿ ಪ್ರಕರಣ ಸಂಬಂಧ 21 ಸಾಕ್ಷಿಗಳ ವಿಚಾರಣೆ ನಡೆದಿತ್ತು. ಪ್ರಾಸಿಕ್ಯೂಷನ್ ಪರವಾಗಿ ೫೩ ದಾಖಲಾತಿ ಹಾಗೂ 6 ಇತರ ವಸ್ತುಗಳನ್ನು ಗುರುತಿಸಲಾಗಿತ್ತು. ಸಾಕ್ಷಿದಾರರ ವಿಚಾರಣೆಯನ್ನು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಾಯಾಲಯದ ಸರಕಾರಿ ಅಭಿಯೋಜಕರಾದ ಶಾಂತಿಬಾಯಿ ನಡೆಸಿದ್ದರು.

ಪ್ರಕರಣ 2022ರ ಫೆಬ್ರವರಿಯಲ್ಲಿ ೨ನೇ ಹೆಚ್ಚುವರಿ ಜಿಲ್ಲಾ ನ್ಯಾಾಯಾಲಯಕ್ಕೆ ವರ್ಗಾವಣೆಯಾಯಿತು. ನ್ಯಾಯಾಧೀಶರಾದ ದಿನೇಶ್ ಹೆಗಡೆ ವಾದ- ವಿವಾದಗಳನ್ನು ಆಲಿಸಿ ಆರೋಪಿಗಳ ವಿರುದ್ಧದ ಆರೋಪಗಳು ರುಜುವಾತಾಗಿದೆ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

ಶಿಕ್ಷೆಯ ವಿವರ: ಆರೋಪಿಗಳ ವಿರುದ್ಧ ಜೀವಾವಧಿ ಶಿಕ್ಷೆ, 7 ವರ್ಷ ಕಠಿನ ಸಜೆ, 7 ವರ್ಷ ಸಾದಾ ಸಜೆ ಹಾಗೂ 6 ತಿಂಗಳು ಶಿಕ್ಷೆ ವಿಧಿಸಲಾಗಿದ್ದು, ಏಕಕಾಲದಲ್ಲಿ ಅವುಗಳನ್ನು ಅನುಭವಿಸುವಂತೆ ಆದೇಶಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago