ಉಡುಪಿ : ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಜ. 22 ರಂದು ನೆರವೆರಲಿದ್ದು, ಈ ಅದ್ಭುತ ಕ್ಷಣದಲ್ಲಿ ಸಾವಿರರು ಭಕ್ತರು ಪಾಲ್ಗೊಳ್ಳಲಿದ್ದಾರೆ. ಆದರೆ ಕರಾವಳಿ ಭಾಗದಿಂದ ಅಲ್ಲಿಗೆ ತೆರಳುವ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಯಾವುದೇ ನೇರ ರೈಲುಗಳು ಇಲ್ಲದಿರುವುದು ಕರಾವಳಿ ಜನರ ಬೇಸರಕ್ಕೆ ಕಾರಣವಾಗಿದೆ.
ಭಾರತೀಯ ರೈಲ್ವೆ ಈಗಾಗಲೇ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ದೇಶದ ವಿವಿಧ ಭಾಗಗಳಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕವನ್ನು ಆರಂಭಿಸಿದೆ. ಕರ್ನಾಟಕದಲ್ಲಿ ಮೈಸೂರು, ಹುಬ್ಬಳ್ಳಿ ಮತ್ತು ಬೆಂಗಳೂರು ಮೂಲಕ ಅಯೋಧ್ಯೆಗೆ ರೈಲು ಸಂಪರ್ಕ ಮಾಡಲು ಉದ್ದೇಶಿಸಿದೆ.
ಆದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಅಯೋಧ್ಯೆ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನೇರ ಸಂಪರ್ಕ ವ್ಯವಸ್ಥೆ ಇಲ್ಲ. ಕರಾವಳಿ ಭಾಗದವರು ಮುಂಬಯಿಗೆ ತೆರಳಿ ಅಲ್ಲಿಂದ ಅಯೋಧ್ಯೆಗೆ ತೆರಳಬೇಕು. ಇಲ್ಲವೇ ಬೆಂಗಳೂರಿಗೆ ತೆರಳಿ ರೈಲುಗಳನ್ನು ಹಿಡಿಯಬೇಕು. ಇದರಿಂದ ಸಮಯ ವ್ಯರ್ಥದ ಜೊತೆಗೆ ವೆಚ್ಚವು ಹೆಚ್ಚಳವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ತಮಿಳುನಾಡು -ಅಯೋಧ್ಯೆ ಎಕ್ಸ್‌ಪ್ರೆಸ್ ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಹಾದುಹೋಗಲಿದ್ದರೂ ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಯಾವುದೇ ರೀತಿಯ ಅನುಕೂಲವಿಲ್ಲ. ಈ ರೈಲು ಕೇರಳ ಮಾರ್ಗದಲ್ಲಿ ಸಂಚರಿಸುತ್ತಿದ್ದು, ಹೆಚ್ಚಿನ ಸೀಟುಗಳನ್ನು ಅಲ್ಲಿನವರೇ ಕಾಯ್ದಿರಿಸುವುದರಿಂದ ಕರಾವಳಿ ಜನರಿಗೆ ಸೀಟು ಸಿಗುವುದೇ ಅನುಮಾನ. ಕನಿಷ್ಠ ವಾರದಲ್ಲಿ ಒಂದು ದಿನವಾದರೂ ಕರಾವಳಿ ಭಾಗದಿಂದ ಉಡುಪಿ ಮಾರ್ಗವಾಗಿ ಅಯೋಧ್ಯೆಗೆ ನೇರ ರೈಲು ಸಂಪರ್ಕ ಒದಗಿಸಬೇಕು ಎಂದು ಕರಾವಳಿ ಜನರು ಮನವಿ ಮಾಡಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…