ಉಡುಪಿ

ಉಡುಪಿ:ಗಣೇಶ ಚತುರ್ಥಿ ಸಾರ್ವಜನಿಕ ಆಚರಣೆ ಮಾಡುವುದು ಕಂಡುಬಂದರೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಉಡುಪಿ: ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭನೆಯಿಂದ ಆಚರಿಸಿಕೊಂಡು ಬರುವ ಗಣೇಶ ಚತುರ್ಥಿ ಆಚರಣೆಯನ್ನು ಈ ಬಾರಿ ಕೊವೀಡ್ ಕಾರಣದಿಂದ ಸರಳವಾಗಿ ಆಚರಿಸುವಂತೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಆಚರಣೆ ಮಾಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸಲು ಅವಕಾಶವಿದ್ದು, ಆದರೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಇದಕ್ಕಾಗಿ ಜಿಲ್ಲಾಡಳಿತವಾಗಲಿ ಗ್ರಾಮಪಂಚಾಯಿತಿಯಾಗಲಿ ಯಾವುದೇ ವ್ಯವಸ್ಥೆ ಮಾಡಿರುವುದಿಲ್ಲ. ಮನೆಗಳಲ್ಲಿ ಗಣೇಶ ಪ್ರತಿಷ್ಟಾಪಿಸಿದವರು ಸ್ಥಳೀಯವಾಗಿ ಹತ್ತಿರದ ಬಾವಿ ಅಥವಾ ಕೆರೆಗಳಲ್ಲಿ ವಿಸರ್ಜನೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಯಾರಾದರೂ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ, ಉತ್ಸವ, ಮೆರವಣಿಗೆ, ಜನ ಸಂದಣಿ ಸೇರಿದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago