Featured

ಉಡುಪಿಗೆ ಇಂದು ಮೋದಿ : ಮೋದಿಯ ಸ್ವಾಗತಿಸಲು ಸಜ್ಜಾಗಿ ನಿಂತ ಕೃಷ್ಣನೂರು – vishwanews24

ಕೃಷ್ಣನೂರು ಉಡುಪಿಗೆ ಇಂದು ಮೋದಿ: ಎಲ್ಲೆಡೆ ಅಲರ್ಟ್, ಇಲ್ಲಿದೆ ಕಾರ್ಯಕ್ರಮದ ವಿವರ

ಉಡುಪಿ: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿಇವತ್ತು ಕೃಷ್ಣನೂರು ಉಡುಪಿಗೆ  ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಸ್ವತಃ ಮೋದಿಯೇ ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ..

ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ
ಬೆಳಗ್ಗೆ 11:05ಕ್ಕೆ ಪ್ರಧಾನಿ ಮೋದಿ ಮಂಗಳೂರಿ​ಗೆ ಆಗಮನ
ಬೆಳಗ್ಗೆ 11:15ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
ಬೆಳಗ್ಗೆ 11:30ಕ್ಕೆ ಉಡುಪಿಯ ಹೆಲಿಪ್ಯಾಡ್​ಗೆ ಪ್ರಧಾನಿ ಆಗಮನ
ಬೆಳಗ್ಗೆ 11:40ರಿಂದ ಮಧ್ಯಾಹ್ನ 12 ಗಂಟೆಯವರೆಗೆ ರೋಡ್​ ಶೋ (ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್​ ವರೆಗೆ)
ಮಧ್ಯಾಹ್ನ 12:00 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ , ಸ್ವರ್ಣ ಲೇಪಿತ ತೀರ್ಥ ಮಂಟಪ ಮೋದಿಯಿಂದ ಉದ್ಘಾಟನೆ
ಮಧ್ಯಾಹ್ನ 1ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ

ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಪ್ರಧಾನಿ ಮೋದಿಯನ್ನ ಸ್ವಾಗತಿಸಲು ಉಡುಪಿ ಸಜ್ಜಾಗಿ ನಿಂತಿದ್ದು, ಪ್ರಧಾನಿ ಮೋದಿ ಕೂಡ ಈ ಬಗ್ಗೆ ಕನ್ನಡದಲ್ಲೇ ಎಕ್ಸ್​ ಸಂದೇಶ ಪ್ರಕಟಿಸಿ​ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮಠದ ಆಸುಪಾಸಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago