ಉಡುಪಿ: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿಇವತ್ತು ಕೃಷ್ಣನೂರು ಉಡುಪಿಗೆ ಬರುತ್ತಿದ್ದಾರೆ. ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಸ್ವತಃ ಮೋದಿಯೇ ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ..
ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ
ಬೆಳಗ್ಗೆ 11:05ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ
ಬೆಳಗ್ಗೆ 11:15ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
ಬೆಳಗ್ಗೆ 11:30ಕ್ಕೆ ಉಡುಪಿಯ ಹೆಲಿಪ್ಯಾಡ್ಗೆ ಪ್ರಧಾನಿ ಆಗಮನ
ಬೆಳಗ್ಗೆ 11:40ರಿಂದ ಮಧ್ಯಾಹ್ನ 12 ಗಂಟೆಯವರೆಗೆ ರೋಡ್ ಶೋ (ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ)
ಮಧ್ಯಾಹ್ನ 12:00 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ , ಸ್ವರ್ಣ ಲೇಪಿತ ತೀರ್ಥ ಮಂಟಪ ಮೋದಿಯಿಂದ ಉದ್ಘಾಟನೆ
ಮಧ್ಯಾಹ್ನ 1ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿಯಿಂದ ಭಾಷಣ
ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಪ್ರಧಾನಿ ಮೋದಿಯನ್ನ ಸ್ವಾಗತಿಸಲು ಉಡುಪಿ ಸಜ್ಜಾಗಿ ನಿಂತಿದ್ದು, ಪ್ರಧಾನಿ ಮೋದಿ ಕೂಡ ಈ ಬಗ್ಗೆ ಕನ್ನಡದಲ್ಲೇ ಎಕ್ಸ್ ಸಂದೇಶ ಪ್ರಕಟಿಸಿ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ನರೇಂದ್ರ ಮೋದಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮಠದ ಆಸುಪಾಸಿನ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…