Featured

ಉಡುಪಿಗೆ ಬಂದ್ರು ಹೊಸ ಡಿಸಿ ಹೆಫಿಬಾ ರಾಣಿ ಕೊರ್ಲಪಾಟಿ, ಪ್ರಿಯಾಂಕ ಮೆರಿ ಫ್ರಾನ್ಸಿಸ್ ಬೆಂಗಳೂರಿಗೆ ಶಿಫ್ಟ್.

ಉಡುಪಿ, : ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಬೆಂಗಳೂರು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಸರಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ.

ಹುಬ್ಬಳ್ಳಿ- ಧಾರವಾಡದ ಸ್ಪೆಶಲ್ ಪರ್ಪೊಸ್ ವೆಹಿಕಲ್ (ಎಸ್‌ಪಿವಿ) ಇದರ ಆಡಳಿತ ನಿರ್ದೇಶಕಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

2015ರ ನ.10ರಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಹಿಂದಿನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ವರ್ಗಾವಣೆಯ ಬಳಿಕ 2017ರ ಫೆ. 21ರಂದು ಅವರಿಂದ ತೆರವಾದ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಅವರು ಅಕ್ರಮ ಮರಳುಗಾರಿಕೆ ವಿರುದ್ಧ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಂಡಿದ್ದರು. 2017ರ ಎ. 2ರಂದು ರಾತ್ರಿ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡ್ಲೂರು ಎಂಬಲ್ಲಿ ಅಕ್ರಮ ಮರಳುಗಾರಿಕೆ ಪರಿಶೀಲಿಸಲು ಕುಂದಾಪುರ ಉಪವಿಭಾಗ ದಂಡಾಧಿಕಾರಿ ಶಿಲ್ಪಾ ನಾಗ್ ಸಹಿತ ಆರು ಮಂದಿಯೊಂದಿಗೆ ತೆರಳಿದ್ದ ಅವರ ಮೇಲೆ ಸ್ಥಳೀಯ ಸುಮಾರು 50 ಮಂದಿಯ ಗುಂಪು ದಾಳಿ ನಡೆಸಿ ಕೊಲೆಗೆ ಯತ್ನಿಸಿತ್ತು.

‘ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ತುಂಬಾ ಖುಷಿಯಾಗಿತ್ತು. ಜಿಲ್ಲಾಧಿಕಾರಿಗಳಿಗೆ ಹಲವು ಸವಾಲಿನ ಕೆಲಸಗಳು ಇರುವುದು ಸಾಮಾನ್ಯ. ಅದೊಂದು ಆಡಳಿತದ ಭಾಗ. ಅಧಿಕಾರಿಗಳು, ನೌಕರರು, ಜನಪ್ರತಿನಿಧಿಗಳು ಎಲ್ಲರು ಸಹಕಾರ ನೀಡಿದ್ದಾರೆ. ಜಿಪಂ ಸಿಇಒ ಆಗಿದ್ದ ನಾನು ಜಿಲ್ಲಾಧಿಕಾರಿಯಾದ ಹಿನ್ನೆಲೆಯಲ್ಲಿ ಇಲ್ಲಿ ಕೆಲಸ ಮಾಡಲು ನನಗೆ ಕಷ್ಟ ಆಗಿಲ್ಲ. ಸಂತೋಷದಿಂದ ಈ ಜಿಲ್ಲೆಯಿಂದ ಹೋಗುತ್ತಿದ್ದೇನೆ’ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರತಿಕ್ರಿಯಿಸಿದ್ದಾರೆ.

 

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago